ದೇಶ

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ, 5 ಯೋಧರಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಪುಂಡಾಟವನ್ನು ಮುಂದುವರೆಸಿದ್ದು, ಪುಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಐವರು ಯೋಧರಿಗೆ ಗಾಯಗಳಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ...

ಜಮ್ಮು-ಕಾಶ್ಮೀರ: ಗಡಿಯಲ್ಲಿ ಪಾಕ್ ಅಪ್ರಚೋದಿತ ಗುಂಡಿನ ದಾಳಿ, 5 ಯೋಧರಿಗೆ ಗಾಯ
ಸಂಗ್ರಹ ಚಿತ್ರ
Published On :
ಜಮ್ಮು; ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ಮತ್ತೆ ತನ್ನ ಪುಂಡಾಟವನ್ನು ಮುಂದುವರೆಸಿದ್ದು, ಪುಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಗೆ ಐವರು ಯೋಧರಿಗೆ ಗಾಯಗಳಾಗಿವೆ ಎಂದು ಮಂಗಳವಾರ ತಿಳಿದುಬಂದಿದೆ. 
ಕೃಷ್ಣಘಾಟಿ ಸೆಕ್ಟರ್ ಬಳಿಯಿರುವ ಭಾರತೀಯ ಸೇನಾ ನೆಲೆಗಳನ್ನು ಗುರಿಯಾಗಿರಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಪೊಲೀಸರು ಹೇಳಿದ್ದಾರೆ. 
ಇಂದು ಬೆಳಿಗ್ಗೆ 7.30ರ ಸುಮಾರಿಗೆ ಪಾಕಿಸ್ತಾನ ಸೇನೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಆರಂಭಿಸಿತ್ತು. ಈ ವೇಳೆ ಅಧಿಕಾರಿ ಸೇರಿ ಒಟ್ಟು 5 ಯೋಧರಿಗೆ ಗಾಯಗಳಾಗಿವೆ. 

ಗಾಯಗೊಂಡ ಯೋಧರನ್ನು ಹೆಲಿಕಾಪ್ಟರ್ ಮೂಲಕ ಉಧಮ್ಪುರದಲ್ಲಿರುವ ಸೇನಾ ಆಸ್ಪತ್ರೆಗೆ ದಾಖಲಿಸಲಾಯಿತು. ಪಾಕಿಸ್ತಾನದ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.