ದೇಶ

ಸುಳ್ಳು ಸುದ್ದಿ ಕಡಿವಾಣದಲ್ಲಿ ಪ್ರಧಾನಿ ಯುರ್ಟ್ ನ್ನು ಪ್ರಶ್ನಿಸಿದ ರಾಹುಲ್ ಗಾಂಧಿ

ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಪ್ರಧಾನಿ ಕಾರ್ಯಾಲಯ ತಡೆ ಹಿಡಿದಿದಿರುವುದನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಸುಳ್ಳು ಸುದ್ದಿ  ಕಡಿವಾಣದಲ್ಲಿ ಪ್ರಧಾನಿ ಯುರ್ಟ್ ನ್ನು ಪ್ರಶ್ನಿಸಿದ ರಾಹುಲ್ ಗಾಂಧಿ
ರಾಹುಲ್ ಗಾಂಧಿ
Published On :
ನವದೆಹಲಿ: ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಆದೇಶವನ್ನು ಪ್ರಧಾನಿ ಕಾರ್ಯಾಲಯ ತಡೆ ಹಿಡಿದಿದಿರುವುದನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ. 
ಮಾರ್ಗಸೂಚಿಗಳನ್ನು ಹಿಂಪಡೆಯುವಂತೆ ಸೂಚಿಸಿರುವ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ರಾಹುಲ್ ಗಾಂಧಿ ಪ್ರಧಾನಿಯ ಈ ನಡೆ ನಿಯಂತ್ರಣ ಇಲ್ಲದೇ ಇರುವುದು ಹಾಗೂ ಪ್ರಧಾನಿ ಭಯ ಪಟ್ಟಿರುವುದನ್ನು ತೋರುತ್ತದೆ ಎಂದು ಹೇಳಿದ್ದಾರೆ. 
2019 ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಈ ಆದೇಶವನ್ನು ಹಿಂಪಡೆಯಲು ಸೂಚಿಸಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.