ಪ್ರಾದೇಶಿಕ ಪಕ್ಷಗಳು ಕೇಂದ್ರದ ವಿರುದ್ಧ ಟಿಡಿಪಿ ಜತೆ ಕೈಜೋಡಿಸಬೇಕು: ಚಂದ್ರಬಾಬು ನಾಯ್ಡು
ಕೇಂದ್ರದ ಎನ್ ಡಿಎ ಸರ್ಕಾರದಿಂದ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಆಗುತ್ತಿರವ....

Published On :
ನವದೆಹಲಿ: ಕೇಂದ್ರದ ಎನ್ ಡಿಎ ಸರ್ಕಾರದಿಂದ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಿಗೆ ಆಗುತ್ತಿರವ 'ಅನ್ಯಾಯ'ದ ವಿರುದ್ಧ ಪ್ರಾದೇಶಿಕ ಪಕ್ಷಗಳು ಟಿಡಿಪಿ ಜತೆ ಕೈಜೋಡಿಸಬೇಕು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಹಾಗೂ ಡಿಟಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರು ಮಂಗಳವಾರ ಕರೆ ನೀಡಿದ್ದಾರೆ.
ಆಡಳಿತರೂಢ ಎನ್ ಡಿಎ ಮೈತ್ರಿಕೂಟದಿಂದ ಹೊರಬಂದ ನಂತರ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿಗೆ ಭೇಟಿ ನೀಡಿರುವ ಆಂಧ್ರ ಸಿಎಂ, ಕೇಂದ್ರ ಸರ್ಕಾರ ಆಂಧ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಮತ್ತು ಅನುದಾನ ನೀಡಬೇಕು ಎಂಬ ಬೇಡಿಕೆಗೆ ತಮ್ಮ ಮೊದಲ ಆದ್ಯತೆ ಎಂದಿದ್ದಾರೆ.
ಇಂದು ಸಂಸತ್ತಿನಲ್ಲಿ ಹಲವು ಪಕ್ಷಗಳ ನಾಯಕರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ನಾಯ್ಡು, ನನ್ನ ರಾಜ್ಯಕ್ಕೆ ಮೊದಲ ಆದ್ಯತೆ ನೀಡುತ್ತೇನೆ. ಎನ್ ಡಿಎ ಸರ್ಕಾರ ನಮ್ಮ ಬೇಡಿಕೆ ಈಡೇರಿಸಲಿಲ್ಲ ಎಂಬ ಕಾರಣಕ್ಕೆ ನಾವು ಎನ್ ಡಿಎದಿಂದ ಹೊರ ಬಂದಿದ್ದೇವೆ ಎಂದರು.
ಇದೇ ವೇಳೆ ಸಂಸತ್ತಿನಲ್ಲಿ ಡಿಟಿಪಿ ಕೇಂದ್ರ ಸರ್ಕಾರದ ವಿರುದ್ಧ ಮಂಡಿಸಲಿರುವ ಅವಿಶ್ವಾಸ ನಿರ್ಣಯಕ್ಕೆ ಪ್ರಾದೇಶಿಕ ಪಕ್ಷಗಳು ಮತ್ತು ಎಡರಂಗ ಪಕ್ಷಗಳು ಬೆಂಬಲಿಸಿವೆ ಎಂದು ನಾಯ್ಡು ತಿಳಿಸಿದ್ದಾರೆ.
ನಾಯ್ಡು ಅವರು ಇಂದು ಸಂಸತ್ ನ ಸೆಂಟ್ರಲ್ ಹಾಲ್ ನಲ್ಲಿ ಎನ್ ಸಿಪಿ ನಾಯಕ ಶರದ್ ಪವಾರ್, ನಾಷನಲ್ ಕಾನ್ಫರೆನ್ಸ್ ಪಕ್ಷದ ಫಾರೂಖ್ ಅಬ್ದುಲ್ಲಾ, ಟಿಎಂಸಿ ಸೌಗತ್ ರಾಯ್, ಎನ್ ಸಿಪಿಯ ಸುಪ್ರಿಯಾ ಸುಳೆ, ಕಾಂಗ್ರೆಸ್ ನ ಜ್ಯೋತಿರಾದಿತ್ಯ ಸಿಂಧೆ, ಟಿಆರ್ ಎಲ್ ನ ಜೀತೇಂದ್ರ ರೆಡ್ಡಿ ಹಾಗೂ ಕಾಂಗ್ರೆಸ್ ಎಂ. ವೀರಪ್ಪ ಮೊಯ್ಲಿ ಅವರನ್ನು ಭೇಟಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


