ಎಸ್ ಸಿ ಎಸ್ ಟಿ ಕಾಯ್ದೆ ತೀರ್ಪು ಮರುಪರಿಶೀಲನೆಗೆ ಅರ್ಜಿ: ಸುಪ್ರೀಂ ನಲ್ಲಿ ಕೇಂದ್ರ ಸರ್ಕಾರ ನೀಡಿದ ಪ್ರಮುಖ ಕಾರಣಗಳು
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಕೇಂದ್ರ ಸರ್ಕಾರ ಏ.02 ರಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.

Published On :
ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧದ ದೌರ್ಜನ್ಯ ತಡೆ ಕಾಯ್ದೆ ಕುರಿತ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಕೇಂದ್ರ ಸರ್ಕಾರ ಏ.02 ರಂದು ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಿದೆ.
ಮಾ.20 ರ ತೀರ್ಪಿನಿಂದಾಗಿ ದೌರ್ಜನ್ಯ ಪ್ರಕರಣಗಳು ದಾಖಲಾಗುವುದು ವಿಳಂಬವಾಗುತ್ತದೆ, ಇದರಿಂದ ಕಾನೂನಿನ ಕಾರ್ಯನಿರ್ವಹಣೆ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಸುಪ್ರೀಂ ಕೋರ್ಟ್ ಗೆ ಕೇಂದ್ರ ಸರ್ಕಾರ ತಿಳಿಸಿದೆ. ಮಾ.20 ರಂದು ನೀಡಿರುವ ತೀರ್ಪಿನಿಂದಾಗಿ 1989 ರ ಕಾನೂನು ದುರ್ಬಲಗೊಳ್ಳುವ ಸಾಧ್ಯತೆ ಇದ್ದು,ಸುಪ್ರೀಂ ಕೋರ್ಟ್ ತನ್ನ ತೀರ್ಪನ್ನು ಮರುಪರಿಶೀಲನೆ ಮಾಡಬೇಕೆಂದು ಹೇಳಿದೆ.
ಇತ್ತೀಚಿನ ದಿನಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರುದ್ಧ ನಡೆದಿರುವ ದೌರ್ಜನ್ಯ, ಹಲ್ಲೆಗಳು ಅಮಾನವೀಯ ಘಟನೆಗಳ ಬಗ್ಗೆ ಮಾಹಿತಿ ನೀಡಿರುವ ಕೇಂದ್ರ ಸರ್ಕಾರ, ಕಠಿಣ ಕಾನೂನಿದ್ದರೂ ಈ ರೀತಿಯ ಅಪರಾಧಗಳು ಕಡಿಮೆಯಾಗುತ್ತಿಲ್ಲ, ಈ ಹಿನ್ನೆಲೆಯಲ್ಲಿ ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ರೂಪಿಸಬೇಕೆಂದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
supreme courtಸುಪ್ರೀಂ ಕೋರ್ಟ್Central Governmentಕೇಂದ್ರ ಸರ್ಕಾರಭಾರತ್ ಬಂದ್Bharat bandhಎಸ್ ಸಿSC/ST Actಎಸ್ ಟಿ ಕಾಯ್ದೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


