ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದ: ಸಿಎಂ ಚಂದ್ರಬಾಬು ನಾಯ್ಡು ಭೇಟಿ ಮಾಡಿದ ಕೇಜ್ರಿವಾಲ್
ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಟಿಡಿಪಿ ವಿವಿಧ ಪಕ್ಷಗಳ ಬೆಂಬಲಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದು, ಈ ನಡುವೆಯೇ ಆಂಧ್ರಪ್ರದೇಶ ಮುಖ್ಯಮಂತ್ರಿ...

Published On :
ನವದೆಹಲಿ; ಆಂಧ್ರಪ್ರದೇಶ ವಿಶೇಷ ಸ್ಥಾನಮಾನ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಸಂಸತ್ತಿನಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಲು ಟಿಡಿಪಿ ವಿವಿಧ ಪಕ್ಷಗಳ ಬೆಂಬಲಗಳಿಗೆ ಮನವಿ ಮಾಡಿಕೊಳ್ಳುತ್ತಿದ್ದು, ಈ ನಡುವೆಯೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇಂದು ಬೆಳಿಗ್ಗೆ 9 ಗಂಟೆಗೆ ನವದೆಹಲಿಯಲ್ಲಿರುವ ಆಂಧ್ರ ಭವನಕ್ಕೆ ಭೇಟಿ ನೀಡಿದ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರನ್ನು ಭೇಟಿ ಮಾಡಿದರು.
ಆಂಧ್ರಪ್ರದೇಶ ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಪಟ್ಟುಹಿಡಿದು ಕುಳಿತಿರುವ ಚಂದ್ರಬಾಬು ನಾಯ್ಡು ಅವರು ಎರಡು ದಿನಗಳ ಕಾಲ ರಾಜಧಾನಿ ದೆಹಲಿಗೆ ಭೇಟಿ ನೀಡಿದ್ದಾರೆ. ನಿನ್ನೆಯಷ್ಟೇ ದೆಹಲಿಗೆ ಆಗಮಿಸಿದ ನಾಯ್ಡು ಅವರು, ಸಂಸತ್ತಿನ ಕೇಂದ್ರೀಯ ಹಾಲ್ ನಲ್ಲಿ ವಿವಿಧ ಪಕ್ಷಗಳ ವಿವಿಧ ನಾಯಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಎನ್'ಸಿಪಿ ನಾಯಕ ಶರದ್ ಪವರ್, ಫಾರೂಕ್ ಅಬ್ದುಲ್ಲಾ, ಸೌಗರ ರಾಯ್, ಸುಪ್ರೀಯಾ ಸುಳೆ, ಜ್ಯೋತಿರಾದಿತ್ಯ ಸಿಕಿಂದಿಯಾ, ಜಿತೇಂದ್ರ ರೆಡ್ಡಿ, ವೀರಪ್ಪ ಮೊಯ್ಲಿ ಹಾಗೂ ರಾಜೀವ್ ಸತವ್ ಸೇರಿದಂತೆ ವಿವಿಧ ನಾಯಕರನ್ನು ಭೇಟಿ ಮಾಡಿ ಮಾತಕತೆ ನಡೆಸಿದ್ದಾರೆಂದು ತಿಳಿದುಬಂದಿದೆ.
ಇದಲ್ಲದೆ, ಅನುಪ್ರಿಯಾ ಪಟೇಲ್, ಹರ್ಸಿಮ್ರತ್ ಕೌರ್ ಬಾದರ್ ಮತ್ತು ತರಿಕ್ ಅನ್ವಾರ್ ಅವರನ್ನು ನಾಯ್ಡು ಭೇಟಿ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiArvind KejriwalAndhra Pradeshಅರವಿಂದ ಕೇಜ್ರಿವಾಲ್ಚಂದ್ರಬಾಬು ನಾಯ್ಡುವಿಶೇಷ ಸ್ಥಾನಮಾನSpecial StatusChandrababu Naidu. ಆಂಧ್ರಪ್ರದೇಶ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


