ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ತಾತ್ಕಾಲಿಕ ನಿಬಂಧನೆಯಲ್ಲ: ಸುಪ್ರೀಂ ಕೋರ್ಟ್
ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ತಾತ್ಕಾಲಿಕ ...

ನವದೆಹಲಿ: ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿ ತಾತ್ಕಾಲಿಕ ನಿಬಂಧನೆಯಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಸರ್ಫೆಸಿ ಕೇಸಿನಲ್ಲಿ ಕಳೆದ ವರ್ಷ ನೀಡಿದ್ದ ತೀರ್ಪಿನಲ್ಲಿ ಸಂವಿಧಾನ ವಿಧಿ 370 ತಾತ್ಕಾಲಿಕ ನಿಬಂಧನೆಯಲ್ಲ ಎಂದು ಹೇಳಲಾಗಿತ್ತು ಎಂದು ಸುಪ್ರೀಂ ಕೋರ್ಟ್ ಹೇಳಿದೆ.
2017ರ ಸರ್ಫೆಸಿ ಕೇಸಿಗೆ ಸಂಬಂಧಪಟ್ಟಂತೆ ನೀಡಿರುವ ತೀರ್ಪಿನ ವಿಷಯ ಇದಾಗಿದ್ದು ಸಂವಿಧಾನ ವಿಧಿ 370ರ ಮೇಲ್ಟಿಪ್ಪಣಿಯ ಹೊರತಾಗಿಯೂ ಇದು ತಾತ್ಕಾಲಿಕ ನಿಬಂಧನೆಯಲ್ಲ ಎಂದು ನ್ಯಾಯಮೂರ್ತಿಗಳಾದ ಎಕೆ ಗೊಯೆಲ್ ಮತ್ತು ಆರ್ ಎಫ್ ನಾರಿಮನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.
ಕೆಲವು ಸಮಯಗಳ ನಂತರ ಈ ಕೇಸನ್ನು ವಿಚಾರಣೆ ನಡೆಸಲಾಗುವುದು ಏಕೆಂದರೆ ಇಂತಹ ಕೇಸುಗಳು ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬಾಕಿಯಿದ್ದು ಇವುಗಳನ್ನು ಶೀಘ್ರದಲ್ಲಿ ಪಟ್ಟಿ ಮಾಡಿ ವಿಚಾರಣೆ ನಡೆಸಲಾಗುವುದು ಎಂದು ಹೆಚ್ಚುವರಿ ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ತಿಳಿಸಿದ್ದಾರೆ.
ಜಮ್ಮು-ಕಾಶ್ಮೀರ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ ವಿಚಾರಣೆಗೆ ಹಾಜರಾಗುವ ಹಿರಿಯ ವಕೀಲ ರಾಜೀವ್ ಧವನ್ ಮತ್ತು ನ್ಯಾಯವಾದಿ ಶೋಯೆಬ್ ಅಲಮ್ ಸ್ಪಷ್ಟನೆ ನೀಡಿ, ಸಂವಿಧಾನ ವಿಧಿ 35ಎ ಸಂಬಂಧಪಟ್ಟ ಕೇಸುಗಳು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬಾಕಿಯಿದೆಯೇ ಹೊರತು ಭಾರತದ ಹೆಚ್ಚುವರಿ ಸಾಲಿಸಿಟರ್ ಜನರಲ್ ಸಲ್ಲಿಸಿದಂತೆ ಸಂವಿಧಾನ ವಿಧಿ 370ಕ್ಕೆ ಸಂಬಂಧಪಟ್ಟಂತೆಯಲ್ಲ ಎಂದು ಹೇಳಿದೆ.
ಈಗಿರುವ ಕೇಸಿನ ಜೊತೆ ಈ ಕೇಸುಗಳನ್ನು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಧವನ್ ಹೇಳಿದ್ದಾರೆ. ಹೆಚ್ಚುವರಿ ಸಾಲಿಸಿಟರ್ ಜನರಲ್ ಒತ್ತಾಯದ ಮೇರೆಗೆ ಕೇಸಿನ ವಿಚಾರಣೆಯನ್ನು ನ್ಯಾಯಪೀಠ ಮೂರು ವಾರಗಳವರೆಗೆ ಮುಂದೂಡಿದೆ.
ಸಂವಿಧಾನ ವಿಧಿ 370 ತಾತ್ಕಾಲಿಕವೆಂದು ಘೋಷಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಕಳೆದ ವರ್ಷ ಏಪ್ರಿಲ್ 11ರಂದು ದೆಹಲಿ ಹೈಕೋರ್ಟ್ ವಜಾಗೊಳಿಸಿ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ವಿಜಯಲಕ್ಷ್ಮಿ ಝಾ ಎನ್ನುವವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


