ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುವುದಿಲ್ಲ, ರದ್ದುಗೊಳಿಸಲು ಬಿಡುವುದೂ ಇಲ್ಲ: ಅಮಿತ್ ಶಾ
ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಲಾಗುವ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುವುದಿಲ್ಲ, ರದ್ದುಗೊಳಿಸಲು ಬಿಡುವುದೂ ಇಲ್ಲ ಎಂದು ಬಿಜೆಪಿ

Published On :
ಒಡಿಶಾ: ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳಿಗೆ ನೀಡಲಾಗುವ ಮೀಸಲಾತಿಯನ್ನು ಬಿಜೆಪಿ ರದ್ದುಗೊಳಿಸುವುದಿಲ್ಲ, ರದ್ದುಗೊಳಿಸಲು ಬಿಡುವುದೂ ಇಲ್ಲ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭರವಸೆ ನೀಡಿದ್ದಾರೆ.
ಒಡಿಶಾದ ಭವಾನಿಪಟ್ನದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿರುವ ಅಮಿತ್ ಶಾ, ಸಂವಿಧಾನದಲ್ಲಿ ಬಿಆರ್ ಅಂಬೇಡ್ಕರ್ ಅವರು ನೀಡಿರುವ ಮೀಸಲಾತಿ ನೀತಿಯನ್ನು ಬದಲಾವಣೆ ಮಾಡಲು ಯಾರೂ ಸಹ ಧೈರ್ಯ ಮಾಡುವುದಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ಎಸ್ ಸಿ/ ಎಸ್ಟಿ ದೌರ್ಜನ್ಯ ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿ ನಡೆದ ಭಾರತ್ ಬಂದ್ ನಲ್ಲಿ ಸಂಭವಿಸಿದ ಪ್ರಾಣಹಾನಿಯ ಬಗ್ಗೆಯೂ ಅಮಿತ್ ಶಾ ಮಾತನಾಡಿದ್ದು, ಸಂಭವಿಸಿದ ದುರ್ಘಟನೆಗೆ ಕಾಂಗ್ರೆಸ್ ಹಾಗೂ ಇತರ ವಿರೋಧಪಕ್ಷಗಳೇ ಕಾರಣ ಎಂದು ಆರೋಪಿಸಿದ್ದಾರೆ.
ತೀರ್ಪನ್ನು ಮರುಪರಿಶೀಲನೆ ನಡೆಸುವಂತೆ ಸುಪ್ರೀಂ ಕೋರ್ಟ್ ಗೆ ಮನವಿ ಸಲ್ಲಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ ಹೊರತಾಗಿಯೂ ಸಹ ಏಕೆ ಬಂದ್ ಗೆ ಕರೆ ನೀಡಲಾಯಿತು ಎಂದು ಅಮಿತ್ ಶಾ ಪ್ರಶ್ನಿಸಿದ್ದಾರೆ.
ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸುತ್ತದೆ ಎಂದು ಮಾಧ್ಯಮ ಹಾಗೂ ಸಾಮಾಜಿಕ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿಯನ್ನು ಹರಿಬಿಡಲಾಗುತ್ತಿದೆ. ಬಿಜೆಪಿ ಮೀಸಲಾತಿಯನ್ನು ರದ್ದುಗೊಳಿಸುವುದಿಲ್ಲ ಎಂದು ಈ ಸಮಾವೇಶದ ಮೂಲಕ ಸ್ಪಷ್ಟಪಡಿಸುತ್ತೇನೆ ಎಂದು ಅಮಿತ್ ಶಾ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


