ದೇಶ

ಪ್ರವಾಸಿಗರ ಮೇಲೆ ಕಲ್ಲು ತೂರಾಟ ವರದಿ ಸುಳ್ಳು ಸುದ್ದಿ: ಜಮ್ಮು-ಕಾಶ್ಮೀರ ಸಚಿವ

ಏ.03 ರಂದು ರಾತ್ರಿ ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಗಳಾಗಿವೆ.

ಪ್ರವಾಸಿಗರ ಮೇಲೆ ಕಲ್ಲು ತೂರಾಟ ವರದಿ ಸುಳ್ಳು ಸುದ್ದಿ: ಜಮ್ಮು-ಕಾಶ್ಮೀರ ಸಚಿವ
ಪ್ರವಾಸಿಗರ ಮೇಲೆ ಕಲ್ಲು ತೂರಾಟ ವರದಿ ಸುಳ್ಳು ಸುದ್ದಿ: ಜಮ್ಮು-ಕಾಶ್ಮೀರ ಸಚಿವ
Published On :
ಶ್ರೀನಗರ: ಏ.03 ರಂದು ಜಮ್ಮು-ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಕಲ್ಲು ತೂರಾಟ ನಡೆದಿರುವ ಬಗ್ಗೆ ವರದಿಗಳಾಗಿವೆ. 
ಪ್ರವಾಸಿಗರ ಮೇಲೆ ಕಲ್ಲು ತೂರಾಟ ನಡೆದಿರುವ ವರದಿಗಳ ಬಗ್ಗೆ ಜಮ್ಮು-ಕಾಶ್ಮೀರ ಸಚಿವ ನಯೀಂ ಅಕ್ತರ್ ಪ್ರತಿಕ್ರಿಯೆ ನೀಡಿದ್ದು, ವರದಿಗಳನ್ನು ಅಲ್ಲಗಳೆದಿದ್ದಾರೆ. ಅಷ್ಟೇ ಅಲ್ಲದೇ ರಾಜ್ಯದ ಘನತೆಗೆ ಧಕ್ಕೆ ಉಂಟುಮಾಡಲು ಈ ರೀತಿಯಾದ ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ. 
ಜಮ್ಮು-ಕಾಶ್ಮೀರ ದೇಶದಲ್ಲಿ ಅತ್ಯಂತ ಸುರಕ್ಷಿತವಾದ ಪ್ರವಾಸಿ ತಾಣವಾಗಿದ್ದು, ತಪ್ಪು ಮಾಹಿತಿಗಳನ್ನು ನಂಬದಂತೆ ಪ್ರವಾಸಿಗರಿಗೆ ನಯೀಂ ಅಕ್ತರ್ ಮನವಿ ಮಾಡಿದ್ದಾರೆ. ಪ್ರವಾಸೋದ್ಯಮದ ಸೀಸನ್ ನಲ್ಲಿ ಇಂತಹ ತಪ್ಪು ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಹರಡಲಾಗುತ್ತಿದೆ ಎಂದು ಸಚಿವರು ಹೇಳಿದ್ದು, ಜಮ್ಮು-ಕಾಶ್ಮೀರದ ಜನತೆಯ ಜೀವನವನ್ನು ಸಾಮಾನ್ಯ ಸ್ಥಿತಿಗೆ ತರಲು ಮಾಧ್ಯಮಗಳು ಸಹಕರಿಸಬೇಕೆಂದು ನಯೀಂ ಅಕ್ತರ್ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.