'ಸುಳ್ಳು ಸುದ್ದಿ' ವಿರುದ್ಧ ಕ್ರಮದ ಕುರಿತು ನಿರ್ದೇಶನವಲ್ಲ, ಕೇವಲ ಹೇಳಿಕೆ ನೀಡಲಾಗಿತ್ತು: ಕೇಂದ್ರ ಸರ್ಕಾರ
ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಕುರಿತು ಕೇಂದ್ರ ಸರ್ಕಾರ ನಿರ್ದೇಶನ ನೀಡಿರಲಿಲ್ಲ. ಬದಲಿಗೆ ಕೇವಲ ಹೇಳಿಕೆ ಮಾತ್ರ ನೀಡಲಾಗಿತ್ತು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ.

Published On :
ನವದೆಹಲಿ: ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ಮಾನ್ಯತೆ ರದ್ದು ಮಾಡುವ ಕುರಿತು ಕೇಂದ್ರ ಸರ್ಕಾರ ನಿರ್ದೇಶನ ನೀಡಿರಲಿಲ್ಲ. ಬದಲಿಗೆ ಕೇವಲ ಹೇಳಿಕೆ ಮಾತ್ರ ನೀಡಲಾಗಿತ್ತು ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹೇಳಿದೆ.
ಸುಳ್ಳು ಸುದ್ದಿ ಪ್ರಕಟಿಸುವ ಸುದ್ದಿ ಸಂಸ್ಥೆಯ ಪ್ರತಿನಿಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಕೇಂದ್ರ ಸರ್ಕಾರದ ಹೇಳಿಕೆ ಬಿಡುಗಡೆಯಾದ ಬೆನ್ನಲ್ಲೇ ಸರ್ಕಾರದ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿತ್ತು. ಆದರೆ ಸುದ್ದಿಸಂಸ್ಥೆಯ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಕೂಡಲೇ ಪ್ರಧಾನಿ ಮೋದಿ ಅವರ ಕಾರ್ಯಾಲಯ ಹಿಂದಕ್ಕೆ ಪಡೆದಿತ್ತು. ಸರ್ಕಾರದ ಈ ಕಾರ್ಯಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ತೆಗೂ ಕಾರಣವಾಗಿತ್ತು.
ಇದೀಗ ಈ ವಿವಾದ ಸಂಬಂಧ ಸ್ಪಷ್ಟನೆ ನೀಡಿರುವ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ತಾನು ಸುಳ್ಳು ಸುದ್ದಿ ಪ್ರಕಟಿಸುವವರ ಕುರಿತ ಕ್ರಮದ ಬಗ್ಗೆ ತಾನು ಕೇವಲ ಹೇಳಿಕೆ ನೀಡಿದ್ದೆ. ಆದರೆ ಆದೇಶ ನೀಡಿರಲಿಲ್ಲ. ಇದು ತಪ್ಪು ತಿಳುವಳಿಕೆಯಿಂದಾಗಿ ಇಲಾಖೆಯ ಆದೇಶ ಎಂದು ಸುದ್ದಿಯಾಗಿತ್ತು ಎಂದು ಸಚಿವಾಲಯ ಸ್ಪಷ್ಟಪಡಿಸಿದೆ. ಅಂತೆಯೇ ಸುಳ್ಳು ಸುದ್ದಿ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ಸುಮಾರು ತಿಂಗಳುಗಳಿಂದ ಪಿಸಿಐ ಮತ್ತು ಎನ್ ಬಿಎ ಜೊತೆ ನಿರಂತರವಾಗಿ ಸರ್ಕಾರ ಚರ್ಚೆ ನಡೆಸುತ್ತಿದೆ. ಅಲ್ಲದೆ ಈ ಸಂಬಂಧ ಇಲಾಖೆಯ ಹಿರಿಯ ಅಧಿಕಾರಿ ಸಂಜಯ್ ಮೂರ್ತಿ ಅವರು ಅಧಿಕಾರಿಗಳೊಂದಿಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇನ್ನು ಸುಳ್ಳು ಸುದ್ದಿ ಪ್ರಕಟಿಸುವ ಪತ್ರಕರ್ತರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ, ಸುಳ್ಳು ಸುದ್ದಿ ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ ಆರೋಪ ಸಾಬೀತಾದರೆ, ಮೊದಲ ತಪ್ಪಿಗೆ ಆರು ತಿಂಗಳ ಮಟ್ಟಿಗೆ ಮತ್ತು ಎರಡನೇ ಬಾರಿಯ ತಪ್ಪಿಗೆ ಒಂದು ವರ್ಷದ ಮಟ್ಟಿಗೆ ಪತ್ರಕರ್ತರ ಮಾನ್ಯತೆ ರದ್ದು ಮಾಡಲಾಗುವುದು. ಮೂರನೇ ಬಾರಿಗೆ ತಪ್ಪು ಮಾಡಿದಲ್ಲಿ ಶಾಶ್ವತವಾಗಿ ಮಾನ್ಯತೆ ರದ್ದು ಮಾಡಲಾಗುವುದು ಎಂದು ಹೇಳಿತ್ತು.
ಅಲ್ಲದೆ ಮುದ್ರಣ ಮಾಧ್ಯಮಗಳಿಗೆ ಸಂಬಂಧಿಸಿ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಭಾರತೀಯ ಪತ್ರಿಕಾ ಮಂಡಳಿಗೆ (ಪಿಸಿಐ) ಮತ್ತು ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಸಂಬಂಧಿಸಿದ ಸುಳ್ಳು ಸುದ್ದಿಗಳ ಕುರಿತು ನಿರ್ಣಯ ಕೈಗೊಳ್ಳುವ ಹೊಣೆಯನ್ನು ಸುದ್ದಿ ಪ್ರಸಾರಕರ ಸಂಘಟನೆ (ನ್ಯೂಸ್ ಬ್ರಾಡ್‌ಕಾಸ್ಟರ್ಸ್ ಅಸೋಸಿಯೇಷನ್/ಎನ್‌ಬಿಎ)ಗೆ ವಹಿಸಲಾಗುವುದು. ಈ ಸಂಸ್ಥೆಗಳು 15 ದಿನಗಳ ಒಳಗೆ ನಿರ್ಣಯ ಕೈಗೊಳ್ಳಬೇಕೆಂದು ನಿರೀಕ್ಷಿಸಲಾಗಿದೆ ಎಂದು ಇಲಾಖೆ ತಿಳಿಸಿತ್ತು.
ಇಲಾಖೆ ಆದೇಶ ಪ್ರಕಟವಾಗುತ್ತಿದ್ದಂತೆಯೇ ಹಲವು ಪತ್ರಕರ್ತರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರಲ್ಲದೇ ನೇರ ಪ್ರಧಾನಿ ಕಾರ್ಯಾಲಯಕ್ಕೆ ಈ ಸಂಬಂಧ ಟ್ಲೀಟ್ ಮಾಡಿದ್ದರು. ಇದರ ಬೆನ್ನಲ್ಲೇ ಮೋದಿ ಸರ್ಕಾರ ತನ್ನ ಆದೇಶವನ್ನು ವಾಪಸ್ ಪಡೆದಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ನವದೆಹಲಿNew DelhiIndian GovernmentModi governmentಭಾರತ ಸರ್ಕಾರಮೋದಿ ಸರ್ಕಾರfake newsಸುಳ್ಳು ಸುದ್ದಿJournalist Accreditationಪತ್ರಕರ್ತರ ಮಾನ್ಯತೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


