ದೇಶ

ಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಮೇಲೆ ದಾಳಿ, ಐವರಿಗೆ ಗಾಯ

ವೇದಾರಣ್ಯಂ ಕರಾವಳಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ....

ಲಂಕಾ ನೌಕಾಪಡೆಯಿಂದ ತಮಿಳುನಾಡು ಮೀನುಗಾರರ ಮೇಲೆ ದಾಳಿ, ಐವರಿಗೆ ಗಾಯ
ಸಾಂದರ್ಭಿಕ ಚಿತ್ರ
Published On :
ನಾಗಪಟ್ಟಣಂ: ವೇದಾರಣ್ಯಂ ಕರಾವಳಿಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ನೌಕಾಪಡೆ ಸಿಬ್ಬಂದಿ ದಾಳಿ ನಡೆಸಿದ್ದು, ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ ಎಂದು ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಗಾಯಗೊಂಡ ಮೀನುಗಾರರು ನಾಗಪಟ್ಟಣಂ ಜಿಲ್ಲೆಯ ನಾಗೋರ್ ನಿವಾಸಿಗಳಾಗಿದ್ದು, ಬುಧವಾರ ತಡರಾತ್ರಿ ಮೀನುಗಾರರ ಮೇಲೆ ಲಂಕಾ ಪಡೆ ದಾಳಿ ನಡೆಸಿದೆ ಎಂದು ಮೀನುಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಕೆ ಗಂಗಾಧರನ್ ಅವರು ಹೇಳಿದ್ದಾರೆ.
ಲಂಕಾ ನೌಕಾಪಡೆ ಸಿಬ್ಬಂದಿ ನಮ್ಮ ನಾವು ಹಿಡಿದ ಮೀನು, ಜಿಪಿಎಸ್ ಸಲಕರಣೆ ಮತ್ತು ಬಲೆಯನ್ನು ಕಿತ್ತುಕೊಂಡಿದ್ದಾರೆ ಎಂದು ಗಾಯಗೊಂಡ ಮೀನುಗಾರ ರಮೇಶ್ ಅವರು ಆರೋಪಿಸಿದ್ದಾರೆ.
ಗಾಯಗೊಂಡ ಐವರು ಮೀನುಗಾರರು ಇಂದು ಬೆಳಗ್ಗೆ ತವರಿಗೆ ಮರಳಿದ್ದು, ಅವರನ್ನು ನಾಗಪಟ್ಟಣಂನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ಸಂಬಂಧ ಕರಾವಳಿ ಭದ್ರತಾ ಪಡೆ ಪೊಲೀಸರಿಗೆ ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ಗಂಗಾಧರನ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.