ಕಾಶ್ಮೀರದ ಬಗ್ಗೆ ಟ್ವೀಟ್ ಮಾಡಿದ್ದ ಅಫ್ರಿದಿಗೆ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ ಮಾಸ್ಟರ್ ಬ್ಲಾಸ್ಟರ್ ಸಚಿನ್!
ಕಾಶ್ಮೀರ ವಿವಾದದ ಕುರಿತು ಭಾರತವನ್ನು ಕೆಣಕಿದ್ದ ಪಾಕಿಸ್ತಾನದ ಮಾಜಿ ಕ್ರಿಗೆಟಿಗ ಶಾಹಿದ್ ಅಫ್ರಿದಿಗೆ ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ್ದಾರೆ.

Published On :
ನವದೆಹಲಿ: ಕಾಶ್ಮೀರ ವಿವಾದದ ಕುರಿತು ಭಾರತವನ್ನು ಕೆಣಕಿದ್ದ ಪಾಕಿಸ್ತಾನದ ಮಾಜಿ ಕ್ರಿಗೆಟಿಗ ಶಾಹಿದ್ ಅಫ್ರಿದಿಗೆ ಮಾಜಿ ಕ್ರಿಕೆಟಿಗ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಮುಟ್ಟಿ ನೋಡಿಕೊಳ್ಳುವಂತೆ ಟಾಂಗ್ ನೀಡಿದ್ದಾರೆ.
ಅಫ್ರಿದಿ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಸಚಿನ್ ತೆಂಡೂಲ್ಕರ್, ನಮ್ಮ ದೇಶವನ್ನು ಮುನ್ನಡೆಸಲು, ನಿರ್ವಹಿಸಲು ಸಮರ್ಥ ಜನರಿದ್ದಾರೆ, ಹೊರಗಿನ ವ್ಯಕ್ತಿ ನಾವೇನು ಮಾಡಬೇಕೆಂಬುದನ್ನು ಹೇಳುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶಾಹಿದ್ ಅಫ್ರಿದಿಯವರಿಗೆ ಭಾರತೀಯ ಕ್ರಿಕೆಟಿಗ ಗೌತಮ್ ಗಂಭೀರ್ ಅವರು ಮಂಗಳವಾರ ಟಾಂಗ್ ನೀಡಿದ್ದರು. ಈ ಬೆನ್ನಲ್ಲೇ ಭಾರತೀಯ ಕ್ರಿಕೆಟರ್ ಗಳಾದ ಸುರೇಶ್ ರೈನಾ, ವಿರಾಟ್ ಕೊಹ್ಲಿ, ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಸಹ ಅಫ್ರಿದಿಗೆ ಟಾಂಗ್ ನೀಡಿದ್ದಾರೆ.
ಕಾಶ್ಮೀರದಲ್ಲಿ ಭಾರತೀಯ ಸೇನೆ 13 ಉಗ್ರರನ್ನು ಹೊಡೆದುರುಳಿಸಿತ್ತು. ಈ ಹಿನ್ನಲೆಯಲ್ಲಿ ಕಾಶ್ಮೀರ ವಿವಾದ ಕುರಿತಂತೆ ಟ್ವೀಟ್ ಮಾಡಿದ್ದ ಅಫ್ರಿದಿಯವರು, ಪಿಒಕೆಯನ್ನು ಭಾರತ ಆಕ್ರಮಿತ ಕಾಶ್ಮೀರ ಎಂದು ಕರೆದಿದ್ದರು. ಭಾರತ ಆಕ್ರಮಿತ ಕಾಶ್ಮೀರದಲ್ಲಿ ಹಿಂಸಾಚರ ನಡೆಯುತ್ತಿದೆ. ಅಲ್ಲಿನ ಪರಿಸ್ಥಿತಿ ಚಿಂತಾಜನಕವಾಗಿದ್ದು, ಸಾರ್ವಜನಿಕರಿಗೆ ಭಾರೀ ತೊಂದರೆಯಾಗುತ್ತಿದೆ. ವಿಶ್ವಸಂಸ್ಥೆ (ಯುಎನ್) ಹಾಗೂ ಇನ್ನಿತರೆ ಸಂಸ್ಥೆಗಳು ರಕ್ತಪಾತವನ್ನು ನಿಲ್ಲಿಸಲು ಏಕೆ ಪ್ರಯತ್ನಿಸುತ್ತಿಲ್ಲ ಎಂದು ಬರೆದುಕೊಂಡಿದ್ದರು. ಇದಕ್ಕೆ ಪಾಕಿಸ್ತಾನಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ಭಾರತೀಯರಿಂದ ಭಾರೀ ಟೀಕೆಗಳು ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


