ಭಯೋತ್ಪಾದಕರನ್ನು ಹಿಡಿಯಲು ಇಡೀ ದೇಶವೇ ಏಕೆ ಮೊಬೈಲ್ ನಂಬರ್ ನ್ನು ಆಧಾರ್ ಗೆ ಜೋಡಿಸಬೇಕು: ಸುಪ್ರೀಂ ಕೋರ್ಟ್
ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆಯುವ ವಂಚನೆಗಳನ್ನು ತಡೆಗಟ್ಟುವುದಕ್ಕೆ ಆಧಾರ್ ಮಹತ್ವದ ಪಾತ್ರ ವಹಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ಅನುಮಾನ ವ್ಯಕ್ತಪಡಿಸಿದ್ದು....

Published On :
ನವದೆಹಲಿ: ಬ್ಯಾಂಕಿಂಗ್ ಕ್ಷೇತ್ರದಲ್ಲಿ ನಡೆಯುವ ವಂಚನೆಗಳನ್ನು ತಡೆಗಟ್ಟುವುದಕ್ಕೆ ಆಧಾರ್ ಮಹತ್ವದ ಪಾತ್ರ ವಹಿಸುವುದರ ಬಗ್ಗೆ ಸುಪ್ರೀಂ ಕೋರ್ಟ್ ಅನುಮಾನ ವ್ಯಕ್ತಪಡಿಸಿದ್ದು, ಬ್ಯಾಂಕ್ ಅಧಿಕಾರಿಗಳೇ ವಂಚಕರೊಂದಿಗೆ ಶಾಮೀಲಾಗಿರುವ ಅನೇಕ ಉದಾಹರಣೆಗಳಿವೆ ಎಂದು ಹೇಳಿದೆ.
ವಂಚಕರು ಅಪರಿಚಿತರು ಎಂಬುದು ಬ್ಯಾಂಕ್ ಗಳಲ್ಲಿ ನಡೆಯುವ ಹಗರಣಗಳಿಗೆ ಕಾರಣವಲ್ಲ, ಬದಲಾಗಿ ಬ್ಯಾಂಕ್ ಅಧಿಕಾರಿಗಳೇ ಕೈಜೋಡಿಸಿರುತ್ತಾರೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದ್ದು, ಆಧಾರ್ ಕಾರ್ಡ್ ನಿಂದ ಬ್ಯಾಂಕಿಂಗ್ ವಂಚನೆಗಳನ್ನು ತಡೆಗಟ್ಟಬಹುದು ಎಂಬ ಕೇಂದ್ರ ಸರ್ಕಾರದ ವಾದವನ್ನು ತಳ್ಳಿಹಾಕಿದೆ.
ಇನ್ನು ಇದೇ ವೇಳೆ ಭಯೋತ್ಪಾದಕರನ್ನು ನಿಗ್ರಹಿಸುವ ಉದ್ದೇಶದಿಂದ ಮೊಬೈಲ್ ಸಂಖ್ಯೆಗೆ ಆಧಾರ್ ನ್ನು ಲಿಂಕ್ ಮಾಡಿಸಬೇಕೆಂಬ ಕೇಂದ್ರ ಸರ್ಕಾರದ ವಾದವನ್ನೂ ಸಹ ಸುಪ್ರೀಂ ಕೋರ್ಟ್ ಪ್ರಶ್ನಿಸಿದ್ದು, ಕೆಲವೇ ಮಂದಿ ಭಯೋತ್ಪಾದಕರನ್ನು ಹಿಡಿಯಲು ಇಡಿ ದೇಶದ ಜನತೆ ಏಕೆ ತಮ್ಮ ಮೊಬೈಲ್ ಫೋನ್ ಗಳನ್ನು ಆಧಾರ್ ಗೆ ಜೋಡಿಸಬೇಕೆಂದು ಕೇಳಿದೆ.
ಇನ್ನು ಮುಂದಿನ ದಿನಗಳಲ್ಲಿ ಆಧಾರ್ ನೊಂದಿಗೆ ಡಿಎನ್ಎ, ರಕ್ತದ ಮಾದರಿಗಳೂ ಸೇರಿದಂತೆ ಹೆಚ್ಚು ಬಯೋಮೆಟ್ರಿಕ್ ವಿವರಗಳನ್ನೂ ಜೋಡಿಸಬೇಕೆಂಬ ಆದೇಶ ಬಂದರೆ ಮುಂದಿನ ದಿನಗಳಲ್ಲಿ ಏನಾಗಲಿದೆ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಆಧಾರ್ ಕಾರ್ಡ್ ನ್ನು ಮೊಬೈಲ್ ಗೆ ಲಿಂಕ್ ಮಾಡಿಸುವುದರಿಂದ ಭಯೋತ್ಪಾದಕರನ್ನು ಹಿಡಿಯುವುದು ಸುಲಭ ಎಂದು ಸರ್ಕಾರದ ಪರ ವಾದ ಮಂಡಿಸಿದ ಅಟಾರ್ನಿ ಜನರಲ್ ವೇಣುಗೋಪಾಲ್ ಹೇಳಿದ್ದಾರೆ. ಆದರೆ ಇದನ್ನು ಒಪ್ಪದ ಸುಪ್ರೀಂ ಕೋರ್ಟ್ ಭಯೋತ್ಪಾದಕರು ಸಿಮ್ ಕಾರ್ಡ್ ಗೂ ಅರ್ಜಿ ಹಾಕುತ್ತಾರಾ? ಕೆಲವೇ ಮಂದಿ ಭಯೋತ್ಪಾದಕರನ್ನು ಹಿಡಿಯಲು ಇಡೀ ದೇಶದ ಜನತೆ ಏಕೆ ಮೊಬೈಲ್ ಸಂಖ್ಯೆಯನ್ನು ಆಧಾರ್ ಗೆ ಲಿಂಕ್ ಮಾಡಬೇಕೆಂದು ಕೋರ್ಟ್ ಪ್ರಶ್ನಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


