ಯಾವುದೇ ನಿರ್ಧಿಷ್ಟ ಸಮುದಾಯದ ಮುಗ್ಧರನ್ನು ಟಾರ್ಗೆಟ್ ಮಾಡುತ್ತಿಲ್ಲ: ದಲಿತರಿಗೆ ಉತ್ತರ ಪ್ರದೇಶ ಸಿಎಂ
ಸಮಾಜದ ಯಾವುದೇ ನಿರ್ಧಿಷ್ಟ ಸಮುದಾಯದ ಮುಗ್ಧರನ್ನು ನಮ್ಮ ಸರ್ಕಾರ ಟಾರ್ಗೆಟ್ ಮಾಡುತ್ತಿಲ್ಲ ಮತ್ತು ದಲಿತರ ವಿರುದ್ಧ....

Published On :
ಲಖನೌ: ಸಮಾಜದ ಯಾವುದೇ ನಿರ್ಧಿಷ್ಟ ಸಮುದಾಯದ ಮುಗ್ಧರನ್ನು ನಮ್ಮ ಸರ್ಕಾರ ಟಾರ್ಗೆಟ್ ಮಾಡುತ್ತಿಲ್ಲ ಮತ್ತು ದಲಿತರ ವಿರುದ್ಧ ಯಾವುದೇ ತಾರತಮ್ಯ ಮಾಡುತ್ತಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶುಕ್ರವಾರ ಹೇಳಿದ್ದಾರೆ.
ಎಸ್ ಸಿ, ಎಸ್ ಟಿ ಕಾಯ್ದೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂದು ದಲಿತ ಸಂಘಟನೆಗಳು ಉತ್ತರ ಪ್ರದೇಶ ಸೇರಿದಂತೆ ದೇಶದಾದ್ಯಂತ ಹಿಂಸಾತ್ಮಕ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಯೋಗಿ ಆದಿತ್ಯನಾಥ್ ಅವರು ತಮ್ಮ ವಿರುದ್ಧ ತಾರತಮ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಉತ್ತರ ಪ್ರದೇಶದ ರಾಬರ್ಟ್ಸ್ಗಂಜ್ ಕ್ಷೇತ್ರದ ದಲಿತ ಬಿಜೆಪಿ ಸಂಸದ ಛೋಟೇ ಲಾಲ್ ಖರ್ ವಾರ್ ಮತ್ತು ಎಟವಾ ದಲಿತ ಬಿಜೆಪಿ ಸಂಸದ ಅಶೋಕ್ ದೊಹ್ರೆ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.
ಈ ಕುರಿತು ಪ್ರತಿಕ್ರಿಯಿಸಿರುವ ಯೋಗಿ ಆದಿತ್ಯನಾಥ್ ಅವರು, ಯಾವುದೇ ಮುಗ್ಧರನ್ನು ಟಾರ್ಗೆಟ್ ಮಾಡುತ್ತಿಲ್ಲ. ಏಪ್ರಿಲ್ 2ರ ಭಾರತ್ ಬಂದ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಕ್ಷ್ಯಾಧಾರಗಳನ್ನು ಆಧರಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಿಸಿಟಿವಿ ದೃಶ್ಯ ಆಧಾರಿಸಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಿದ್ದಾರೆ. ಬೆಂಕಿ ಹಚ್ಚುವ, ಧ್ವಂಸಗೊಳಿಸುವ ಮತ್ತು ಕಲ್ಲು ತೂರಾಟದಲ್ಲಿ ತೊಡಗಿದವರ ವಿರುದ್ಧ ಮಾತ್ರ ಪ್ರಕರಣ ದಾಖಲಿಸಲಾಗಿದೆ ಎಂದು ಸಿಎಂ ಮಾಧ್ಯಮಕ್ಕೆ ತಿಳಿಸಿದ್ದಾರೆ.
ನಮ್ಮ ಸರ್ಕಾರ ದಲಿತರ ವಿಚಾರದಲ್ಲಿ ಭಾರತ ಬಂದ್ ಗೂ ಮುನ್ನ ಮತ್ತು ನಂತರ ಯಾವುದೇ ತಾರತಮ್ಯ ಎಸಗಿಲ್ಲ. ಅನಗತ್ಯವಾಗಿ ಯಾರ ವಿರುದ್ಧವೂ ಸುಳ್ಳು ಪ್ರಕರಣ ದಾಖಲಿಸಿಲ್ಲ ಎಂದು ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಉತ್ತರ ಪ್ರದೇಶ ಪೊಲೀಸರು ದಲಿತರನ್ನು ಟಾರ್ಗೆಟ್ ಮಾಡುತ್ತಿದ್ದು, ಭಾರತ ಬಂದ್ ನಂತರ ಅವರ ವಿರುದ್ಧ ಕೇಸ್ ದಾಖಲಿಸಲಾಗುತ್ತಿದೆ ಎಂದು ಸಂಸದ ಅಶೋಕ್ ದೊಹ್ರೆ ಅವರು ಪ್ರಧಾನಿ ಬರೆದ ಪತ್ರದಲ್ಲಿ ಆರೋಪಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


