ದೇಶ

ತೆಲಂಗಾಣ: ಕಾಲುವೆಗೆ ಉರುಳಿದ ಟ್ರ್ಯಾಕ್ಟರ್, 12 ಮಹಿಳೆಯರು ಜಲಸಮಾಧಿ

ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪಡಮಟಿ ತಾಂಡಾ ಬಳಿ ಟ್ರ್ಯಾಕ್ಟರ್ ವೊಂದು ಕಾಲುವೆಗೆ ಬಿದ್ದ ಪರಿಣಾಮ 12 ಮಂದಿ ಕಾರ್ಮಿಕ ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ...

ತೆಲಂಗಾಣ: ಕಾಲುವೆಗೆ ಉರುಳಿದ ಟ್ರ್ಯಾಕ್ಟರ್, 12 ಮಹಿಳೆಯರು ಜಲಸಮಾಧಿ
ಕಾಲುವೆಗೆ ಉರುಳಿದ ಟ್ರ್ಯಾಕ್ಟರ್
Published On :
ಹೈದರಾಬಾದ್: ತೆಲಂಗಾಣದ ನಲ್ಗೊಂಡ ಜಿಲ್ಲೆಯ ಪಡಮಟಿ ತಾಂಡಾ ಬಳಿ ಟ್ರ್ಯಾಕ್ಟರ್ ವೊಂದು ಕಾಲುವೆಗೆ ಬಿದ್ದ ಪರಿಣಾಮ 12 ಮಂದಿ ಕಾರ್ಮಿಕ ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. 
ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿ ಬಿದ್ದಿದೆ. ಟ್ರ್ಯಾಕ್ಟರ್ ನಲ್ಲಿ 35 ಮಹಿಳೆಯರಿದ್ದು ಒಬ್ಬರನ್ನು ರಕ್ಷಿಸಲಾಗಿದ್ದು 24 ಮಂದಿ ನಾಪತ್ತೆಯಾಗಿದ್ದಾರೆ. 
ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು ಸ್ಥಳೀಯ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಚಾಲಕನ ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. 
ಅಪಘಾತದಲ್ಲಿ ಕೂಲಿ ಕಾರ್ಮಿಕ ಮಹಿಳೆಯರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಹೇರಿಕೆಯಾಗುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.