ಏಮ್ಸ್ಗೆ ದಾಖಲಾದ ಅರುಣ್ ಜೇಟ್ಲಿ, ಇಂದು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ
ಕೇಂದ್ರ ಹಣಕಾಸು ಸಚಿವ ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ.

Published On :
ನವದೆಹಲಿ: ಕೇಂದ್ರ ಹಣಕಾಸು ಸಚಿವ ಸಚಿವ ಅರುಣ್ ಜೇಟ್ಲಿ ಅವರು ಶುಕ್ರವಾರ ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಶನಿವಾರ ಕಿಡ್ನಿ ಕಸಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ.
65 ವರ್ಷದ ಅರುಣ್ ಜೇಟ್ಲಿ ಅವರಿಗೆ ಇಂದು ಕಿಡ್ನಿ ಕಸಿ ಶಸ್ತ್ರಚಿಕಿತ್ಸೆ ನಡೆಯಲಿದ್ದು, ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿರುವುದಾಗಿ ಆಸ್ಪತ್ರೆ ಮೂಲಗಳು ತಿಳಿಸಿವೆ.
ತಮ್ಮ ಲಂಡನ್ ಪ್ರವಾಸವನ್ನು ರದ್ದುಗೊಳಿಸಿ, ಕಳೆದ ಸೋಮವಾರದಿಂದ ಯಾವುದೇ ಆಡಾಳಿತಾತ್ಮಕ ಕಾರ್ಯಗಳಲ್ಲಿ ಭಾಗವಹಿಸದೇ ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದ ಜೇಟ್ಲಿ ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗುರುವಾರವಷ್ಟೇ ತಮಗಿರುವ ಕಿಡ್ನಿ ಸಮಸ್ಯೆ ಬಗ್ಗೆ ಟ್ವೀಟ್ ಮಾಡಿದ್ದ ಅರುಣ್ ಜೇಟ್ಲಿ, ನಾನು ಮೂತ್ರಪಿಂಡಕ್ಕೆ ಸಂಬಂಧಿಸಿರುವ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದೇನೆ. ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿ ವಿಶ್ರಾಂತಿ ಪಡೆದುಕೊಳ್ಳುತ್ತಿರುವುದಾಗಿ ತಿಳಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Arun Jaitleyಅರುಣ್ ಜೇಟ್ಲಿಕಿಡ್ನಿ ಕಸಿ ಶಸ್ತ್ರಚಿಕಿತ್ಸೆkidney transplant surgeryadmitted to AIIMSಏಮ್ಸ್ ಗೆ ದಾಖಲು
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


