ದೇಶದ ಮುಂದಿನ ಪ್ರಧಾನಿಯನ್ನು ನಿರ್ಧರಿಸುವಲ್ಲಿ ದಲಿತರ ಪಾತ್ರ ಮಹತ್ವದಾಗಿದೆ - ಕಾಂಗ್ರೆಸ್
ದಲಿತರು ಎನ್ ಡಿಎ ಮೈತ್ರಿಕೂಟ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ದೇಶದ ಮುಂದಿನ ಪ್ರಧಾನಮಂತ್ರಿಯ ನಿರ್ಧರಿಸುವಲ್ಲಿ ಅವರ ಪಾತ್ರ ಮಹತ್ವದಾಗಿದೆ ಎಂದು ಕಾಂಗ್ರೆಸ್ ಮುಖಂಡ ನಿತಿನ್ ರಾವತ್ ಹೇಳಿದ್ಜಾರೆ.

ನವದೆಹಲಿ : ದಲಿತರು ಎನ್ ಡಿಎ ಮೈತ್ರಿಕೂಟ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ದೇಶದ ಮುಂದಿನ ಪ್ರಧಾನಮಂತ್ರಿಯ ನಿರ್ಧರಿಸುವಲ್ಲಿ ಅವರ ಪಾತ್ರ ಮಹತ್ವದಾಗಿದೆ ಎಂದು ಕಾಂಗ್ರೆಸ್ ಮುಖಂಡ ನಿತಿನ್ ರಾವತ್ ಹೇಳಿದ್ಜಾರೆ.
ಕಾಂಗ್ರೆಸ್ ಪರಿಶಿಷ್ಟ ಜಾತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾವತ್, ಉತ್ತಮ ಭವಿಷ್ಯಕ್ಕಾಗಿ ರಾಹುಲ್ ಗಾಂಧಿ ಅವರ ನಾಯಕತ್ವದ ಕಡೆಗೆ ದಲಿತ ಯುವ ಜನರು ಆಕರ್ಷಿತಗೊಂಡಿದ್ದಾರೆ. ಹೀಗಾಗಿ ಬೇರೆ ನಾಯಕರಿಗಿಂತಲೂ ಕಾಂಗ್ರೆಸ್ ಅಧ್ಯಕ್ಷರು ಪ್ರಧಾನಿಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ದಲಿತ ಮತಗಳ ಮೇಲಿನ ಕಣ್ಣನಿಂದ ಪ್ರಧಾನಿ ನರೇಂದ್ರಮೋದಿ ಹಾಗೂ ಬಿಜೆಪಿ ಈ ವರ್ಗದ ನಾಯಕ ಅಂಬೇಡ್ಕರ್ ಅವರಿಗೆ ಗೌರವ ಸೂಚಿಸುವ ನಾಟಕವಾಡುತ್ತಿದ್ದಾರೆ . ಎನ್ ಡಿಎ ಸರ್ಕಾರದ ಅವಧಿಯಲ್ಲಿ ಶಿಕ್ಷಣ, ಉದ್ಯೋಗವನ್ನು ನಿರಾಕರಿಸಲಾಗಿದೆ.
ಈ ಆಕ್ರೋಶ ಮುಂದಿನ ಪ್ರಧಾನಿಯನ್ನು ನಿರ್ಧರಿಸಲಿದೆ ಎಂದು ನಿತಿನ್ ರಾವತ್ ಸುದ್ದಿಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


