ಪ್ರಧಾನಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲು ಯತ್ನಿಸಿದ ಟಿಡಿಪಿ ಸಂಸದರ ಬಂಧನ
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಇಲ್ಲಿನ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಲು ಯತ್ನಿಸಿದ ತೆಲುಗು ದೇಶಂ ಪಾರ್ಟಿಯ ಸಂಸದರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ನವದೆಹಲಿ : ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವಂತೆ ಆಗ್ರಹಿಸಿ ಇಲ್ಲಿನ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರಮೋದಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಲು ಯತ್ನಿಸಿದ ತೆಲುಗು ದೇಶಂ ಪಾರ್ಟಿಯ ಸಂಸದರನ್ನು ಪೊಲೀಸರು ಇಂದು ಬಂಧಿಸಿದ್ದಾರೆ.
ಈ ಸಂಬಂಧ ಮುಂದಿನ ಕಾರ್ಯತಂತ್ರ ರೂಪಿಸುವ ಬಗ್ಗೆ ರಾಜ್ಯಸಭೆ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ವೈ.ಎಸ್. ಚೌದರಿ ಅವರ ನಿವಾಸದಲ್ಲಿ ಇಂದು ಬೆಳಿಗ್ಗೆ ಸಭೆ ನಡೆಸಿದ ಬಳಿಕ ಪ್ರಧಾನಿ ನರೇಂದ್ರಮೋದಿ ನಿವಾಸದ ಬಳಿ ಪ್ರತಿಭಟನೆ ನಡೆಸಲು ನಿರ್ಧರಿಸಲಾಯಿತು.
ಆದಾಗ್ಯೂ, ಪ್ರಧಾನಿ ನಿವಾಸಕ್ಕೆ ಬರುವ ಮಾರ್ಗದಲ್ಲಿಯೇ ಎಲ್ಲಾ ಪ್ರತಿಭಟನಾಕಾರರನ್ನು ದೆಹಲಿ ಪೊಲೀಸರು ಹಾಗೂ ಸಿಆರ್ ಪಿಎಫ್ ಸಿಬ್ಬಂದಿ ಬಂಧಿಸಿದ್ದಾರೆ.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಪ್ರಧಾನಿ ಮೋದಿ ಕ್ರಮ ಕೈಗೊಳ್ಳಬೇಕು, ಅವರ ಭರವಸೆಯನ್ನು ಈಡೇರಿಸಬೇಕು, ಹೀಗಾಗಿ ಅವರ ನಿವಾಸದ ಬಳಿ ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ಸಂಸದ ಜಾದವ್ ಗಲಾ ಹೇಳಿದರು.
ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡಲು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ನಿರಾಕರಿಸಿದ ನಂತರ ತೆಲುಗುದೇಶಂ ಪಾರ್ಟಿಯ ಸಚಿವರು ರಾಜೀನಾಮೆ ನೀಡಿದ್ದರು. ಬಳಿಕ ಬಿಜೆಪಿ ಮೈತ್ರಿಕೂಟದಿಂದ ಟಿಡಿಪಿ ಹೊರಗೆ ಬಂದಿತ್ತು.
ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಟಿಡಿಪಿ ಮಂಡಿಸಿದೆ ಆದರೆ, ಸಂಸತ್ತಿನಲ್ಲಿ ಪ್ರತಿಪಕ್ಷಗಳ ಗದ್ದಲದ ಹಿನ್ನೆಲೆಯಲ್ಲಿ ಈ ನಿರ್ಣಯ ಮೇಲಿನ ಚರ್ಚೆ ನಡೆಯಲಿಲ್ಲ.
ಈ ಮಧ್ಯೆ ವೈಎಸ್ ಆರ್ ಕಾಂಗ್ರೆಸ್ ನಾಯಕರು ಇದೇ ವಿಚಾರಕ್ಕೆ ಆಗ್ರಹಿಸಿ ಮೂರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


