ಕಾಮನ್ ವೆಲ್ತ್ ಕ್ರೀಡಾಕೂಟ 2018: ಸಾಧಕರಿಗೆ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ
ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ 2018 ಕ್ರೀಡಾಕೂಟದಲ್ಲಿ ಭಾರತೀಯರು ಅತ್ಯುತ್ತಮ ಸಾಧನೆಗಳನ್ನು ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಸಾಧಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ...

Published On :
ನವದೆಹಲಿ; ಆಸ್ಟ್ರೇಲಿಯಾದ ಗೋಲ್ಡ್ ಕೋಸ್ಟ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ 2018 ಕ್ರೀಡಾಕೂಟದಲ್ಲಿ ಭಾರತೀಯರು ಅತ್ಯುತ್ತಮ ಸಾಧನೆಗಳನ್ನು ಮಾಡುತ್ತಿದ್ದು, ಈ ಹಿನ್ನಲೆಯಲ್ಲಿ ಸಾಧಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ವೇಟ್ ಲಿಫ್ಟರ್ ಪ್ರದೀಪ್ ಸಿಂಗ್ ಅತ್ತುತ್ತಮ ಪ್ರದರ್ಶನವನ್ನುನೀಡುತ್ತಿದ್ದು, 105 ಕೆ.ಜಿ ವೇಟ್ ಲಿಫ್ಟಿಂಗ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಪ್ರದೀಸ್ ಸಿಂಗ್ ಭಾರತದ ಹೆಮ್ಮೆ ಎಂದು ಕೊಂಡಾಡಿದ್ದಾರೆ.
ಬಳಿಕ ಚಿನ್ನ ಹಾಗೂ ಬೆಳ್ಲಿ ಪದಕಗಳನ್ನು ಗೆದ್ದಿರುವ ಶೂಟರ್ಸ್ ಗಳಾದ ಜಿತು ರೈ ಮತ್ತು ಮೆಹುಲ್ ಘೋಷ್, ಓಮ್ ಮಿತರ್ವಲ್ ಮತ್ತು ಅಪೂರ್ವ ಚೆಂದೇಲಾ ಅವರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಜಿತು ರೈ ಅವರ ಗೆಲವಿಗೆ ಇಡೀ ಭಾರತದ ಸಂಭ್ರಮವನ್ನಾಚರಿಸುತ್ತಿದೆ. ಕಾಮನ್ ವೆಲ್ತ್ ಕ್ರೀಡಾಕೂಟ 2018ರಲ್ಲಿ ಭಾರತೀಯ ಸಾಧನೆಯನ್ನು ನೋಡುತ್ತಿರುವುದು ಅತ್ಯದ್ಭುತವಾಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


