ದೇಶ

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್: ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ಸಾವು

ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಗಂಭೀರವಾಗಿ ಗಾಯಗೊಂಡು, ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಆನಂದ್ ನಗರದಲ್ಲಿ ಭಾನುವಾರ ನಡೆದಿದೆ...

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್: ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ಸಾವು
ಸಾಂದರ್ಭಿಕ ಚಿತ್ರ
Published On :
ಥಾಣೆ; ತುಂಬು ಗರ್ಭಿಣಿಯನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಮಹಿಳೆ ಗಂಭೀರವಾಗಿ ಗಾಯಗೊಂಡು, ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯ ಆನಂದ್ ನಗರದಲ್ಲಿ ಭಾನುವಾರ ನಡೆದಿದೆ.
ಗರ್ಭಿಣಿ ಸೇರಿ ಆಕೆಯ ನಾಲ್ವರು ಕುಟುಂಬ ಸದಸ್ಯರು ಆಂಬ್ಯುಲೆನ್ಸ್ ನಲ್ಲಿದ್ದರು. ಆ್ಯಂಬುಲೆನ್ಸ್ ಮುಂಬೈನ ಮಲೆಗಾಂವ್'ಗೆ ತೆರಳುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ವಾಹನ ರಸ್ತೆ ವಿಭಜಕಕ್ಕೆ ರಭಸದಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಗರ್ಭಿಣಿ ಮಹಿಳೆಯ ಹೊಟ್ಟೆಯಲ್ಲಿದ್ದ ಮಗು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ. 
ಘಟನೆ ಸಂಭವಿಸುತ್ತಿದ್ದಂತೆಯೇ ಪೊಲೀಸ್ ಅಧಿಕಾರಿಗಳು, ಸಂಚಾರಿ ಪೊಲೀಸರು ಹಾಗೂ ಸ್ಥಳೀಯ ವಿಪತ್ತು ನಿರ್ವಹಣಾ ದಳದ ಅಧಿಕಾರಿಗಳು, ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. 
ಗರ್ಭಿಣಿ ಮಹಿಳೆಯ ಗಂಭೀರವಾಗಿ ಗಾಯಗೊಂಡಿದ್ದರು. ಬಳಿಕ ಅಧಿಕಾರಿಗಳು ಮಹಿಳೆಯನ್ನು ಮುಂಬೈನ ರಾಜವಾಡಿ ಆಸ್ಪತ್ರೆಗೆ ದಾಖಲಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.