ಮುಂಬೈ ವಿಮಾನ ನಿಲ್ದಾಣದಲ್ಲಿ ಇಂದು ಮತ್ತು ನಾಳೆ ಆರು ಗಂಟೆಗಳ ಕಾಲ ವಿಮಾನ ಹಾರಾಟ ಸ್ಥಗಿತ
ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಮತ್ತು ನಾಳೆ ಆರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದ್ದು , ವಿಮಾನ ಹಾರಾಟ ಇಲ್ಲದೆ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ

ಮುಂಬೈ :ಇಲ್ಲಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ಮತ್ತು ನಾಳೆ ಆರು ಗಂಟೆಗಳ ಕಾಲ ಸ್ಥಗಿತಗೊಳಿಸಲಾಗಿದ್ದು , ವಿಮಾನ ಹಾರಾಟ ಇಲ್ಲದೆ ಸಾವಿರಾರು ಪ್ರಯಾಣಿಕರು ಪರದಾಡುವಂತಾಗಿದೆ.
ಬೆಳಗ್ಗೆ 11 ರಿಂದ ಸಂಜೆ 5 ರವರೆಗೆ ಈ ವಿಮಾನ ನಿಲ್ದಾಣದಿಂದ ವಿಮಾನಗಳು ಹಾರಾಟ ನಡೆಸುತ್ತಿಲ್ಲ. ಹಲವು ದಿನಗಳ ನಂತರ ವಿಮಾನ ನಿಲ್ದಾಣವನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಈ ಅವಧಿಯಲ್ಲಿ ವಿಮಾನಗಳ ಹಾರಾಟವನ್ನು ನಿರ್ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನಿರ್ವಹಣಾ ಕಾರ್ಯದಿಂದಾಗಿ ಈ ಅವಧಿಯಲ್ಲಿ ಪರ್ಯಾಯ ರನ್ ವೇ ಇರುವುದಿಲ್ಲ ಎಂಬಂತಹ ಮಾಹಿತಿ ತಿಳಿದುಬಂದಿದೆ.ಇದರಿಂದಾಗಿ ಏರ್ ಇಂಡಿಯಾ 34 ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದ್ದರೆ, 8 ದೇಶಿಯ ವಿಮಾನಗಳ ಹಾರಾಟದ ವೇಳಾಪಟ್ಟಿಯನ್ನು ಬದಲಿಸಲಾಗಿದೆ.
ವಿಮಾನ ನಿಲ್ದಾಣದ ರನ್ ವೇ ನಿರ್ವಹಣಾ ಚಟುವಟಿಕೆಯಿಂದಾಗಿ ಏ. 9 ಮತ್ತು 10 ರಂದು ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೂ ರನ್ ವೇ ಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಏರ್ ಇಂಡಿಯಾ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಈ ಅವಧಿಯಲ್ಲಿ ಪ್ರಯಾಣದ ಬಗ್ಗೆ ಪ್ರಯಾಣಿಕರು ಯೋಜನೆ ಮಾಡಿಕೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ . ಒಂದು ವೇಳೆ ವಿಳಂಬವಾದರೆ, ಅನುಕೂಲವಾದಂತಹ ವೇಳೆಯಲ್ಲಿ ಬುಕ್ಕಿಂಗ್ಸ್ ಮಾಡಿಕೊಳ್ಳುವಂತೆ ತಿಳಿಸಲಾಗಿದೆ.
ಜೆಟ್ ಏರ್ ವೆಸ್ 64 ದೇಶಿಯ ಮತ್ತು ಆರು ಅಂತಾರಾಷ್ಟ್ರೀಯ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿದೆ. 53 ದೇಶಿಯ ಮತ್ತು 17 ಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಅವಧಿಯನ್ನು ಬದಲಿಸಲಾಗಿದೆ.
ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಾರ, ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜನವರಿ 2018 ರಿಂದ ನಿತ್ಯ 980 ವಿಮಾನಗಳು ಹಾರಾಟ ನಡೆಸುತ್ತಿದ್ದು, ನಿಲ್ದಾಣ ಬಳಸುವ ಪ್ರಯಾಣಿಕರ ಸಂಖ್ಯೆ 40 ಮಿಲಿಯನ್ ದಾಟಿದೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


