ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ಭಾರತ್ ಬಂದ್: ದೇಶಾದ್ಯಂತ ವ್ಯಾಪಕ ಭದ್ರತೆ
ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ನಿಮಿತ್ತ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

Published On :
ನವದೆಹಲಿ: ಜಾತಿ ಆಧಾರಿತ ಮೀಸಲಾತಿ ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ನಿಮಿತ್ತ ದೇಶಾದ್ಯಂತ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರಮುಖವಾಗಿ ರಾಜಸ್ತಾನ ಮತ್ತು ಮಧ್ಯ ಪ್ರದೇಶದಲ್ಲಿ ಭಾರತ್ ಬಂದ್ ತೀವ್ರತೆ ಪಡೆದಿದ್ದು, ಜೈಪುರದಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಅಂತೆಯೇ ಜೈಪುರ ಮತ್ತು ಭೋಪಾಲ್ ನಲ್ಲಿ ಮೊಬೈಲ್ ಇಂಟರ್ ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ತುರ್ತು ಪ್ರಹಾರ ದಳ, ಅಶ್ರುವಾಯು ದಳ ಮತ್ತು ಜಲಫಿರಂಗಿ ದಳಗಳನ್ನು ನಿಯೋಜನೆ ಮಾಡಲಾಗಿದೆ.
ಅಚ್ಚರಿ ಎಂದರೆ ಇಂದಿನ ಭಾರತ್ ಬಂದ್ ಅನ್ನು ನೇರವಾಗಿ ಯಾವುದೇ ಸಂಘಟನೆ ಕರೆ ನೀಡಿಲ್ಲವಾದರೂ, ಸಾಮಾಜಿಕ ಜಾಲತಾಣಗಳಲ್ಲಿ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಹೀಗಿದ್ದೂ ಬಂದ್ ಗೆ ರಾಜಸ್ತಾನ ಮತ್ತು ಮಧ್ಯ ಪ್ರದೇಶದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇನ್ನು ಬಂದ್ ಕುರಿತು ಮಾತನಾಡಿದ ಭೋಪಾಲ್ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರ ಚುಬೇ ಅವರು, ಸಾಮಾಜಿಕ ಜಾಲತಾಣ, ವಾಟ್ಸಪ್ ಸೇರಿದಂತೆ ಸುದ್ದಿವಾಹಿನಿಗಳು ಇತರೆ ಸಂಪರ್ಕ ಮಾಧ್ಯಮಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ಪ್ರಚೋದನಕಾರಿ ಅಂಶಗಳು ಕಂಡುಬಂದರೆ ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಚಂಬಲ್ ಕಣಿವೆ, ಭಿಂಡ್ ಪ್ರದೇಶಳಲ್ಲಿ ಇಂದು ರಾತ್ರಿ 9 ರಿಂದ ನಾಳೆ ಸಂಜೆ ಆರು ಗಂಟೆಯವರೆಗೂ ಕರ್ಫ್ಯೂ ಹೇರಲು ನಿರ್ಧರಿಸಲಾಗಿದೆ. ಈಗಾಗಲೇ ಏಪ್ರಿಲ್ 2ರಂದು ಭಿಂಡ್ ಪ್ರದೇಶದಲ್ಲಿ ನಡೆದ ಗಲಭೆಯಲ್ಲಿ ನಾಲ್ಕು ಮಂದಿ ಸಾವನ್ನಪ್ಪಿರುವ ಹಿನ್ನಲೆಯಲ್ಲಿ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.
ಇತರೆ ರಾಜ್ಯಗಳಲ್ಲಿ ಮಿಶ್ರ ಪ್ರತಿಕ್ರಿಯೆ
ರಾಜಸ್ಥಾನ, ಮಧ್ಯ ಪ್ರದೇಶದಲ್ಲಿ ಭಾರತ್ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆಯಾದರೂ, ಬಿಹಾರ, ಉತ್ತರ ಪ್ರದೇಶ, ಹರ್ಯಾಣ ಮತ್ತು ಪಂಜಾಬ್ ನಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


