ದೇಶ

ಐಆರ್ ಸಿಟಿಸಿ ಹೋಟೆಲ್ ಹಗರಣ: ಸಿಬಿಐಯಿಂದ ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ ವಿಚಾರಣೆ

ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್‍(ಐಆರ್ ಸಿಟಿಸಿ) ಹೊಟೇಲ್ ಹಗರಣಕ್ಕೆ....

ಐಆರ್ ಸಿಟಿಸಿ ಹೋಟೆಲ್ ಹಗರಣ: ಸಿಬಿಐಯಿಂದ ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ  ವಿಚಾರಣೆ
ರಾಬ್ರಿ ದೇವಿ
Published On :
ನವದೆಹಲಿ: ಇಂಡಿಯನ್ ರೈಲ್ವೆ ಕೇಟರಿಂಗ್ ಅಂಡ್ ಟೂರಿಸಂ ಕಾರ್ಪೊರೇಷನ್‍(ಐಆರ್ ಸಿಟಿಸಿ) ಹೊಟೇಲ್ ಹಗರಣಕ್ಕೆ ಸಂಬಂಧಿಸಿದಂತೆ ಬಿಹಾರ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರನ್ನು ಸಿಬಿಐ ಮಂಗಳವಾರ ತೀವ್ರ ವಿಚಾರಣೆಗೆ ಒಳಪಡಿಸಿದೆ.
ಸಿಬಿಐ ಅಧಿಕಾರಿಗಳ ತಂಡ ರಾಬ್ರಿ ದೇವಿ ಅವರನ್ನು ಪಾಟ್ನಾದಲ್ಲಿಯೇ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2006ರಲ್ಲಿ ಬಿಹಾರದ ಮಾಜಿ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ಹೊಟೇಲ್ ಗಳಿಗೆ ನೀಡಿದ ಗುತ್ತಿಗೆಯಲ್ಲಿ ಅಕ್ರಮ ಎಸಗಿದ ಆರೋಪದ ಮೇಲೆ ಸಿಬಿಐ ಲಾಲು ಪತ್ನಿ ರಾಬ್ರಿದೇವಿ ಹಾಗೂ ಪುತ್ರ ತೇಜಸ್ವಿ ಯಾದವ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ಈ ಸಂಬಂಧ ಕಳೆದ ಜೂನ್ ನಲ್ಲಿ ಸಿಬಿಐ, ದೆಹಲಿ, ಪಾಟ್ನಾದಲ್ಲಿರುವ ಲಾಲು ನಿವಾಸ ಹಾಗೂ ಗುರುಗಾಂವ್ ಸೇರಿದಂತೆ ಒಟ್ಟು 12 ಕಡೆ ದಾಳಿ ನಡೆಸಿತ್ತು. ಅಲ್ಲದೆ ಸಿಬಿಐ ಕೋರ್ಟ್ ಮುಂದೆ ಹಾಜರಾಗುವಂತೆ ಸಿಬಿಐ ಸಮನ್ಸ್ ನೀಡಿತ್ತು. 
ಪುರಿ ಮತ್ತು ರಾಂಚಿಯಲ್ಲಿ ರೈಲ್ವೆಗಾಗಿ ಎರಡು ಹೋಟೆಲ್ ಗಳನ್ನು ನಡೆಸಲು ಹರ್ಷ್ ಕೊಚ್ಚರ್ ಎಂಬುವರಿಗೆ 15 ವರ್ಷಗಳ ಗುತ್ತಿಗೆ ನೀಡಿದ್ದು ಅದಕ್ಕೆ ಪ್ರತಿಯಾಗಿ ಲಾಲು ಪ್ರಸಾದ್ ಯಾದವ್ ಕುಟುಂಬ ಪಾಟ್ನಾದಲ್ಲಿ ಎರಡು ಎಕರೆ ಜಮೀನನ್ನು ಪಡೆದಿದ್ದಾರೆ ಎಂದು ಸಿಬಿಐ ಆರೋಪಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.