ಐಪಿಎಲ್ ಪಂದ್ಯದ ವೇಳೆ ಹಿಂಸಾಚಾರ ಪ್ರಕರಣ; ಸಮಸ್ಯೆಗೆ ಹಿಂಸೆ ಉತ್ತರವಲ್ಲ ಎಂದ ರಜನಿಕಾಂತ್
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಐಪಿಎಲ್ ವಿರೋಧಿ ಪ್ರತಿಭಟನೆಗಳು ಹಿಂಸಾರೂಪಕ್ಕೆ ತಿರುಗಿರುವುದನ್ನು ಸೂಪರ್ ಸ್ಚಾರ್ ಮತ್ತು ಹಾಲಿ ತಮಿಳುನಾಡು ರಾಜಕಾರಣಿ ರಜನಿಕಾಂತ್ ತೀವ್ರ ಖಂಡಿಸಿದ್ದಾರೆ.

Published On :
ಚೆನ್ನೈ: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಆಗ್ರಹಿಸಿ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಮತ್ತು ಐಪಿಎಲ್ ವಿರೋಧಿ ಪ್ರತಿಭಟನೆಗಳು ಹಿಂಸಾರೂಪಕ್ಕೆ ತಿರುಗಿರುವುದನ್ನು ಸೂಪರ್ ಸ್ಚಾರ್ ಮತ್ತು ಹಾಲಿ ತಮಿಳುನಾಡು ರಾಜಕಾರಣಿ ರಜನಿಕಾಂತ್ ತೀವ್ರ ಖಂಡಿಸಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲಿ ಬರೆದುಕೊಂಡಿರುವ ರಜನಿಕಾಂತ್ ನಮ್ಮ ಸಮಸ್ಯೆಗೆ ಹಿಂಸೆ ಉತ್ತರವಲ್ಲ. ನಮ್ಮ ಪ್ರತಿಭಟನೆ ಏನಿದ್ದರೂ ಶಾಂತವಾಗಿರಬೇಕು ಎಂದು ಹೇಳಿದ್ದಾರೆ. ಅಂತೆಯೇ ಪೊಲೀಸರ ಮೇಲಿನ ಹಲ್ಲೆಯನ್ನು ಕೂಡ ಖಂಡಿಸಿರುವ ರಜನಿಕಾಂತ್, ಇಂತಹ ಕಿಡಿಗೇಡಿ ಕೃತ್ಯಗಳನ್ನು ಕೂಡಲೇ ನಿಯಂತ್ರಿಸಬೇಕಿದೆ. ಇಂತಹ ಬೆಳವಣಿಗೆ ದೇಶಕ್ಕೇ ಮಾರಕ. ಇಂತಹ ಕೃತ್ಯಗಳಲ್ಲಿ ಪಾಲ್ಗೊಳ್ಳುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ರಜನಿಕಾಂತ್ ಆಗ್ರಹಿಸಿದ್ದಾರೆ.
ಇನ್ನು ತಮ್ಮ ಟ್ವೀಟ್ ನೊಂದಿಗೆ ಪ್ರತಿಭಟನಾ ನಿರತರು ಪೊಲೀಸರಿಗೆ ಥಳಿಸುತ್ತಿರುವ ವಿಡಿಯೋವನ್ನೂ ಕೂಡ ರಜನಿ ಟ್ವೀಟ್ ಮಾಡಿದ್ದಾರೆ.
ತಮಿಳು ನಾಡು ಮತ್ತು ಕರ್ನಾಟಕ ನಡುವಿನ ಕಾವೇರಿ ನೀರು ಹಂಚಿಕೆ ಕುರಿತಾಗಿ ಈಚೆಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ವಿರೋಧಿಸಿ ಚೆನ್ನೈನಲ್ಲಿನ ಐಪಿಎಲ್ ಪಂದ್ಯಗಳ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
RajinikanthTwitterಟ್ವಿಟರ್Chennaiಚೆನ್ನೈರಜನಿಕಾಂತ್ಕಾವೇರಿ ವಿವಾದCauvery rowAnti IPL Protestಐಪಿಎಲ್ ವಿರೋಧಿ ಪ್ರತಿಭಟನೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


