ರೈತರ ಆತ್ಮಹತ್ಯೆ ಕುರಿತಂತೆ ಪ್ರಧಾನಿ ಮೋದಿ ಉಪವಾಸ ಸತ್ಯಾಗ್ರಹ ಮಾಡಲ್ಲ ಯಾಕೆ?: ಒವೈಸಿ
ಸಂಸತ್ ಕಲಾಪಗಳು ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಸತ್ಯಾಗ್ರಹ ಮಾಡುತ್ತಾರೆ...

Published On :
ಹೈದರಾಬಾದ್: ಸಂಸತ್ ಕಲಾಪಗಳು ವ್ಯರ್ಥವಾದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಉಪವಾಸ ಸತ್ಯಾಗ್ರಹ ಮಾಡುತ್ತಾರೆ. ಅದೇ ರೈತರ ಆತ್ಮಹತ್ಯೆ ಕುರಿತಂತೆ ಯಾಕೆ ಉಪವಾಸ ಮಾಡುವುದಿಲ್ಲ ಎಂದು ಅಲ್ ಇಂಡಿಯಾ ಮಜ್ಲಿಸ್ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಒವೈಸಿ ಪ್ರಶ್ನಿಸಿದ್ದಾರೆ.
ಬಜೆಟ್ ಅಧಿವೇಶನ ಬಲಿಯಾಗಲು ಕಾಂಗ್ರೆಸ್ ಕಾರಣ ಎಂದು ಆಡಳಿತರೂಢ ಬಿಜೆಪಿ ಆರೋಪಿಸಿದ್ದು, ಪ್ರತಿಪಕ್ಷಗಳ ನಡೆಯನ್ನು ಖಂಡಿಸಿ ಮೋದಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಹಾಗೂ ಬಿಜೆಪಿ ಸಂಸದರೊಂದಿಗೆ ಏಪ್ರಿಲ್ 12ರಂದು ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಲು ನಿರ್ಧರಿಸಿದ್ದಾರೆ. ಅದೇ ತಮ್ಮ ಸುಳ್ಳು ಭರವಸೆ ಮೂಲಕ ಕಳೆದ ನಾಲ್ಕು ವರ್ಷಗಳಲ್ಲಿ ಸಾವಿರಾರು ರೈತರ ಆತ್ಮಹತ್ಯೆಗೆ ಶರಣಾಗಿದ್ದಾರೆ ಅವರಿಗಾಗಿ ಮೋದಿ ಅವರು ಉಪವಾಸ ಸತ್ಯಾಗ್ರಹ ಮಾಡುವುದಿಲ್ಲ ಎಂದು ಓವೈಸಿ ಹೇಳಿದ್ದಾರೆ.
ರೈತರಿಗಾಗಿ ಉಪವಾಸ ಸತ್ಯಾಗ್ರಹ ಮಾಡದ ಪ್ರಧಾನಿ ಮೋದಿ? ಅವರು ಉತ್ತರಪ್ರದೇಶದ ದಲಿತರ ವಿರುದ್ಧದ ದೌರ್ಜನ್ಯದ ವಿರುದ್ಧ ಸತ್ಯಾಗ್ರಹ ಮಾಡುತ್ತಾರಾ? ಎಂದು ಹೈದರಾಬಾದ್ ಲೋಕಸಭಾ ಸಂಸದ ಅಸಾದುದ್ದೀನ್ ಒವೈಸಿ ಪ್ರಶ್ನಿಸಿದ್ದಾರೆ.
ಪತ್ರಕರ್ತರೊಂದಿಗೆ ಮಾತನಾಡಿದ ಒವೈಸಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಎಂಟು ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ನಿಲುವನ್ನು ತಿಳಿಯಲು ಬಯಸುತ್ತೇನೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿAsaduddin OwaisiHunger Strikeಉಪವಾಸ ಸತ್ಯಾಗ್ರಹಅಸಾದುದ್ದೀನ್ ಒವೈಸಿರೈತರ ಆತ್ಮಹತ್ಯೆFarmers Suicides
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


