ದೇಶ

ಪಶ್ಚಿಮ ಬಂಗಾಳ: ಕೋಲ್ಕತ್ತಾ ಹೈಕೋರ್ಟ್ ಮುಂದಿನ ಆದೇಶದವರೆಗೆ ಪಂಚಾಯತ್ ಚುನಾವಣೆಗೆ ತಡೆ

ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ತನ್ನ ಆದೇಶವನ್ನು ಹಿಂಪಡೆದುಕೊಂಡಿದೆ.

ಪಶ್ಚಿಮ ಬಂಗಾಳ: ಕೋಲ್ಕತ್ತಾ ಹೈಕೋರ್ಟ್ ಮುಂದಿನ ಆದೇಶದವರೆಗೆ ಪಂಚಾಯತ್ ಚುನಾವಣೆಗೆ ತಡೆ
ಸಾಂದರ್ಭಿಕ ಚಿತ್ರ
Published On :
ಕೋಲ್ಕತ್ತಾ: ನಾಮಪತ್ರ ಸಲ್ಲಿಕೆ ಪ್ರಕ್ರಿಯೆಯನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ಚುನಾವಣಾ ಆಯೋಗ ತನ್ನ ಆದೇಶವನ್ನು ಹಿಂಪಡೆದುಕೊಂಡಿದೆ. ಇದರಿಂದಾಗಿ ಅಸಮಾಧಾನಗೊಂಡ ಬಿಜೆಪಿ ನ್ಯಾಯಾಲಯದ ಮೊರೆ ಹೋಗಿದ್ದು  ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಪಂಚಾಯತ್ ಚುನಾವಣಾ ಪ್ರಕ್ರಿಯೆಗೆ ತಡೆ ನೀಡಿದೆ.
ಬಿಜೆಪಿ ಸಲ್ಲಿಸಿರುವ ರಿಟ್ ಅರ್ಜಿ ಅಸಮರ್ಥನೀಯ. ಎಂದ ರಾಜ್ಯ ಚುನಾವಣಾ ಆಯೋಗದ ವಾದವನ್ನು ಹೈಕೋರ್ಟ್ ತಿರಸ್ಕರಿಸಿದ್ದು ಆಯೋಗವು ಚುನಾವಣೆಗಳನ್ನು ನಡೆಸುವ ಎಲ್ಲಾ ಅಧಿಕಾರ ಹೊಂದಿದೆ ಆದರೆ ಯಾವುದೇ ರೀತಿಯ ವಿಘಟನೆ ಅಥವಾ ಸಮಸ್ಯೆಗಳಾದಲ್ಲಿ ಅದನ್ನು ನ್ಯಾಯಾಲಯ ಸರಿಪಡಿಸಲು ಅವಕಾಶವಿದೆ ಎಂದಿತು.
ನ್ಯಾಯಮೂರ್ತಿ ಸುಬ್ರತಾ ತಾಲೂಕುದಾರ್ ಅವರು ನ್ಯಾಯಾಲಯದ ಮುಂದಿನ ಆದೇಶ ಬರುವವರೆಗೆ ಪಶ್ಚಿಮ ಬಂಗಾಳದ ಗ್ರಾಮ ಪಂಚಾಯತ್ ಚುನಾವಣೆಗಳಿಗೆ ತಡೆ ನೀಡಿ ಆದೇಶ ಹೊರಡಿಸಿದ್ದಾರೆ.
ಚುನಾವಣೆ ಪ್ರಕ್ರಿಯೆಯ ಬಗ್ಗೆ ಸಮಗ್ರ ಸ್ಥಿತಿ ವರದಿಯನ್ನು ಆಯೋಗ ನ್ಯಾಯಾಲಯಕ್ಕೆ ಸಲ್ಲಿಸುವಂತೆ ತಾಲೂಕುದಾರ್ ಹೇಳಿದ್ದಾರೆ.ಇದು ನಾಮಪತ್ರ ಸಲ್ಲಿಸಿದವರ ಸಂಖ್ಯೆ ಹಾಗೂ ತಿರಸ್ಕರಿಸಿದವರ ಶೇಕಡಾವಾರು ವಿವರಗಳನ್ನು ಒಳಗೊಂಡಿರುತ್ತದೆ.
ಏ.16 ರಂದು ಎಸ್ಇಸಿ ನಿರ್ಧಾರವನ್ನು ಪ್ರಶ್ನಿಸುವ ಮನವಿಯನ್ನು ನ್ಯಾಯಾಲಯ ವಿಚಾರಣೆಗೆ ಎತ್ತಿಕೊಳ್ಳಲಿದೆ. ಇದರಲ್ಲಿ ನಾಮನಿರ್ದೇಶನಗಳನ್ನು ಸಲ್ಲಿಸುವ ದಿನಾಂಕವನ್ನು ಒಂದು ದಿನದ ಮಟ್ಟಿಗೆ ವಿಸ್ತರಿಸಿದ್ದ ಏಪ್ರಿಲ್ 9 ಪ್ರಕಟಣೆಯನ್ನು  ಆಯೋಗವು ಹಿಂಪಡೆದ ಬಗ್ಗೆ ವಿವರಣೆ ಕೇಳಲಾಗುವುದು.
ರಾಜ್ಯ ಚುನಾವಣಾ ಆಯೋಗ ಎಪ್ರಿಲ್ 9ರಂದು ಗ್ರಾಮ ಪಂಚಾಯತ್ ಚುನಾವಣೆಗಾಗಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಒಂದು ದಿನ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಿತ್ತು. ಇದರ ಸಂಬಂಧ ಮರುದಿನ ಏ.10ರಂದು ಆಯೋಗ ತನ್ನ ಹಿಂದಿನ ಪ್ರಕಟಣೆಯನ್ನು ಹಿಂಪಡೆದು ಹೊಸ ಆದೇಶ ಹೊರಡಿಸಿತ್ತು.  ಆಯೋಗದ ಈ ಕ್ರಮವನ್ನು ಬಿಜೆಪಿ ಕೋಲ್ಕತ್ತಾ ಹೈಕೋರ್ಟ್ ನಲ್ಲಿ ಪ್ರಶ್ನಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.