ದೇಶ

ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್ ದಾಖಲು

ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆಗೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ವಿರುದ್ಧ ಉತ್ತರಪ್ರದೇಶ ಪೊಲೀಸರು ಗುರುವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ...

ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕನ ವಿರುದ್ಧ ಎಫ್ಐಆರ್ ದಾಖಲು
ಕುಲ್ದೀಪ್ ಸಿಂಗ್ ಸೆಂಗಾರ್
Published On :
ಉನ್ನಾವೋ; ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆಗೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗಾರ್ ವಿರುದ್ಧ ಉತ್ತರಪ್ರದೇಶ ಪೊಲೀಸರು ಗುರುವಾರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. 
ಈ ಕುರಿತಂತೆ ಠಾಣಾಧಿಕಾರಿ ರಾಜೇಶ್ ಸಿಂಗ್ ಅವರು ದೃಡೀಕರಿಸಿದ್ದಾರೆ. ಶಾಸಕನ ವಿರುದ್ಧ ಸೆಕ್ಷನ್ 363, 366, 376, 506 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. 
ಅತ್ಯಾಚಾರ ಆರೋಪ ಮಾಡಿದ್ದ ಮಹಿಳೆಯ ತಂದೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಸಂತ್ರಸ್ತೆ ತಂದೆ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದರು. ಈ ಪ್ರಕರಣ ಸುದ್ದಿಗೆ ಗ್ರಾಸವಾಗುತ್ತಿದ್ದಂತೆಯೇ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಉತ್ತರಪ್ರದೇಶ ಸರ್ಕಾರ ಪ್ರಕರಣವನ್ನು ವಿಶೇಷ ತನಿಖಾ ದಳಕ್ಕೆ ವಹಿಸಿತ್ತು. ಇದೀಗ ಪ್ರಕರಣವನ್ನು ಸಿಬಿಐ ತನಿಖೆಗೆ ಕೈಗೆತ್ತುಕೊಂಡಿದೆ. 
ಶಾಸಕನ ವಿರುದ್ಧ ಎಫ್ಐಆರ್ ದಾಖಲಾಗಿರುವ ಹಿನ್ನಲೆಯಲ್ಲಿ ಸಂತ್ರಸ್ತ ಮಹಿಳೆಯ ಕುಟುಂಬಸ್ಥರು ಸಂಸತ ವ್ಯಕ್ತಪಡಿಸಿದ್ದಾರೆ. ಕುಲ್ದೀಪ್ ಸಿಂಗ್ ವಿರುದ್ಧ ಕೊನೆಗೂ ಎಫ್ಐಆರ್ ದಾಖಲಾಗಿರುವುದಕ್ಕೆ ಸಂತೋಷವಾಗುತ್ತಿದೆ. ಸರ್ಕಾರ ಇದನ್ನು ಮೊದಲೇ ಮಾಡಿದ್ದರೆ ನನ್ನ ಅಣ್ಣ ಬದುಕುತ್ತಿದ್ದ. ಮುಂದೆ ಶಾಸಕನನ್ನು ಬಂಧನಕ್ಕೊಳಪಡಿಸಲಾಗುತ್ತದೆಯೋ ಅಥವಾ ಇಲ್ಲವೋ ಎಂಬುದನ್ನು ಕಾದು ನೋಡಬೇಕಿದೆ ಎಂದು ಮೃತ ವ್ಯಕ್ತಿಯ ಸಹೋದರ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.