ದೇಶ

ಉನ್ನಾವೊ ಅತ್ಯಾಚಾರ ಪ್ರಕರಣ: ಸಂತ್ರಸ್ಥೆ ಚಿಕ್ಕಪ್ಪನಿಗೆ ಜೀವ ಬೆದರಿಕೆ, ಆರೋಪಿ ಶಾಸಕನ ಬಂಧನಕ್ಕೆ ಆಗ್ರಹ

ಉನ್ನಾವೊ ಅತ್ಯಾಚಾರ ಸಂತ್ರಸ್ಥೆ, ತನ್ನ ಚಿಕ್ಕಪ್ಪನಿಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ, ಆರೋಪಿ ಬಿಜೆಪಿ .....

ಉನ್ನಾವೊ ಅತ್ಯಾಚಾರ ಪ್ರಕರಣ: ಸಂತ್ರಸ್ಥೆ ಚಿಕ್ಕಪ್ಪನಿಗೆ ಜೀವ ಬೆದರಿಕೆ, ಆರೋಪಿ ಶಾಸಕನ ಬಂಧನಕ್ಕೆ ಆಗ್ರಹ
ಕುಲದೀಪ್ ಸಿಂಗ್ ಸೆಂಗರ್
Published On :
ಉನ್ನಾವೊ(ಉತ್ತರ ಪ್ರದೇಶ): ಉನ್ನಾವೊ ಅತ್ಯಾಚಾರ ಸಂತ್ರಸ್ಥೆ, ತನ್ನ ಚಿಕ್ಕಪ್ಪನಿಗೆ ಜೀವ ಬೆದರಿಕೆ ಇದೆ ಎಂದು ಆರೋಪಿಸಿದ್ದ, ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಅವರನ್ನು ಈ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.
ಮೊದಲು ಆರೋಪಿ ಶಾಸಕನನ್ನು ಬಂಧಿಸಲಿ. ನಂತರ ಪ್ರಕರಣವನ್ನು ಸಿಬಿಐಗೆ ಕೊಡಲಿ ಎಂದಿರುವ ಸಂತ್ರಸ್ಥೆ, ಏಕೆ ಆರೋಪಿಯನ್ನು ರಕ್ಷಿಸುತ್ತಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.
ಆರೋಪಿ ಶಾಸಕ ಹೊರಗಿದ್ದರೆ ನನ್ನ ಚಿಕ್ಕಪ್ಪನನ್ನೂ ಹತ್ಯೆ ಮಾಡುವ ಸಾಧ್ಯತೆ ಇದೆ. ಅವರು ಈಗಗಾಲೇ ನನ್ನ ಅಪ್ಪನನ್ನು ಕೊಂದಿದ್ದಾರೆ. ಈಗ ಚಿಕ್ಕಪ್ಪನನ್ನು ಕೊಲೆ ಮಾಡಬಹುದು ಎಂದು ಸಂತ್ರಸ್ಥೆ ಎಎನ್ಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.
ಸಿಬಿಐ ಸಹ ಪ್ರಾಮಾಣಿಕವಾಗಿ ತನಿಖೆ ನಡೆಸಿದರೆ ಮಾತ್ರ ನನಗೆ ನ್ಯಾಯ ಸಿಗುತ್ತದೆ. ಇಲ್ಲದಿದ್ದರೆ ಇಲ್ಲ ಎಂದು ಸಂತ್ರಸ್ಥೆ ಕಣ್ಣೀರಿಟ್ಟರು.
17 ವರ್ಷ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಡಳಿತರೂಢ ಬಿಜೆಪಿ ಪಕ್ಷದ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಲಖನೌ ಪೊಲೀಸರು ಈಗಾಗಲೇ ಎಫ್ ಐಆರ್ ದಾಖಲಿಸಿದ್ದಾರೆ.
ಶಾಸಕ ಸೆಂಗರ್‌ ವಿರುದ್ಧ ಪೋಕ್ಸೋ ಕಾಯಿದೆ ಮತ್ತು ಐಪಿಸಿ ಸೆಕ್ಷನ್ 336, 363, 376 ಮತ್ತು 506ರ ಅಡಿ ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.