ದೇಶ

ದೆಹಲಿ ಕಟ್ಟಡದಲ್ಲಿ ಅಗ್ನಿ ಅವಘಡ: 4 ಜನರ ಸಾವು

ವಾಯುವ್ಯ ದೆಹಲಿಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ...

ದೆಹಲಿ ಕಟ್ಟಡದಲ್ಲಿ ಅಗ್ನಿ ಅವಘಡ: 4 ಜನರ ಸಾವು
ಸಾಂದರ್ಭಿಕ ಚಿತ್ರ
Published On :
ನವದೆಹಲಿ; ವಾಯುವ್ಯ ದೆಹಲಿಯಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಅಗ್ನಿ ಅವಘಡ ಸಂಭಿಸಿದ್ದು, ಘಟನೆಯಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ. 
ವಾಯುವ್ಯ ದೆಹಲಿಯ ಕೊಹಲ್ ಎನ್'ಕ್ಲೇವ್ ಎಂಬ ನಾಲ್ಕು ಅಂತಸ್ತಿ ಕಟ್ಟಡದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಇಂದು ಬೆಳಿಗಿನ ಜಾವ 2.48ಕ್ಕೆ ಅಗ್ನಿ ಅವಘಡ ಸಂಭವಿಸಿದೆ. ಈ ವೇಳೆ ಕಟ್ಟಡದ ಮೊದಲನೇ ಮಹಡಿಯಲ್ಲಿ ಮಲಗಿದ್ದ ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. 
ಬೆಂಕಿ ಆವರಿಸಿಕೊಳ್ಳುತ್ತಿದ್ದಂತೆಯೇ ನಾಲ್ವರೂ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ. ಆದರೆ, ಉಸಿರಾಟ ಸಮಸ್ಯೆಯಿಂದಾಗಿ ನಾಲ್ವರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆಂದು ಅಧಿಕಾರಿಗಳು ಹೇಳಿದ್ದಾರೆ. 
ಸುದ್ದಿ ತಿಳಿಯುತ್ತಿದ್ದಂತೆಯೇ 10 ಅಗ್ನಿಶಾಮಕ ದಳದ ವಾಹನಗಳೊಂದಿಗೆ ಸ್ಥಳಕ್ಕಾಮಗಿಸಿದ ಅಧಿಕಾರಿಗಳು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.