ಆರೋಪಿ ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲಾಗದು: ಯೋಗಿ ಆದಿತ್ಯನಾಥ್
ಆರೋಪಿಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಮ್ಮ ಸರ್ಕಾರ ಅಪರಾಧ ಮತ್ತು ಅಪರಾಧಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ...

Published On :
ಲಕ್ನೋ: ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಆರೋಪಿಗಳು ಎಷ್ಟೇ ಪ್ರಭಾವಶಾಲಿಯಾಗಿದ್ದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ, ತಮ್ಮ ಸರ್ಕಾರ ಅಪರಾಧ ಮತ್ತು ಅಪರಾಧಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.
ಉನ್ನಾವೋ ಗ್ಯಾಂಗ್ ರೇಪ್ ಪ್ರಕರಣವನ್ನು ಸಿಬಿಐ ಗೆ ಹಸ್ತಾಂತರಿಸಲಾಗಿದೆ,, ಸಿಬಿಐ ತನಿಖೆ ಆರಂಭಿಸಿದೆ. ಇನ್ನೊಂದೆಡೆ ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ಸಿಂಗರ್ ವಿಚಾರಣೆ ನಡೆಸಲಾಗುತ್ತಿದೆ. ಏತನ್ಮಧ್ಯೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಮೌನ ಮುರಿದಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, 'ಸರ್ಕಾರ ಮತ್ತು ಆಡಳಿತ ಅಪರಾಧ ಮತ್ತು ಅಪರಾಧಿಗಳೊಂದಿಗೆ ಯಾವುದೇ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಅಪರಾಧಿ ಎಷ್ಟು ದೊಡ್ಡವರಾದರೂ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು' ಎಂದು ತಿಳಿಸಿದ್ದಾರೆ.
"ಪ್ರಕರಣದ ಮಾಹಿತಿ ದೊರೆತ ತಕ್ಷಣ, ಸರ್ಕಾರವು ತನಿಖೆಗಾಗಿ ಎಸ್ಐಟಿ ಅನ್ನು ರಚಿಸಿದೆ. ಅಪರಾಧ ಮತ್ತು ಭ್ರಷ್ಟಾಚಾರ ವಿಚಾರದಲ್ಲಿ ಯುಪಿಎ ಸರ್ಕಾರ ಶೂನ್ಯ ಸಹಿಷ್ಣುತೆ ನೀತಿಯ ಮೇಲೆ ಕಾರ್ಯನಿರ್ವಹಿಸುತ್ತಿದೆ. ಆದ್ದರಿಂದ ಅಪರಾಧಿಗಳು ಯಾವುದೇ ಸ್ಥಿತಿಯಲ್ಲಿ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ" ಎಂದು ಯೋಗಿ ತಿಳಿಸಿದ್ದಾರೆ.
ಶುಕ್ರವಾರ ಬೆಳಿಗ್ಗೆ ಆರೋಪಿ ಶಾಸಕ ಕುಲ್ದೀಪ್ ಸಿಂಗ್ ಸೆಂಗರ್ ಅವರನ್ನು ಸಿಬಿಐ ತಂಡ ಬಂಧಿಸಿದೆ. ಬೆಳಿಗ್ಗೆ 5 ಗಂಟೆಯಿಂದಲೂ ಏಳು ಜನರ ಸಿಬಿಐ ತಂಡ ಕುಲ್ದೀಪ್ ಅವರನ್ನು ವಿಚಾರಣೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
CBIಸಿಬಿಐಯೋಗಿ ಆದಿತ್ಯನಾಥ್Yogi AdithyanathUnnao gangrape case.influentialಉನ್ನಾವೋ ಆತ್ಯಾಚಾರ ಪ್ರಕರಣಪ್ರಭಾವಶಾಲಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


