ದೇಶ

ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಲು ಪೋಕ್ಸೋ ಕಾಯ್ದೆಗೆ ತಿದ್ದುಪಡಿ: ಮನೇಕಾ ಗಾಂಧಿ

ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಮರಣ ದಂಡನೆ ವಿಧಿಸುವ ಸುಲವಾಗಿ ಪೋಕ್ಸೋ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.

ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣ ದಂಡನೆ ವಿಧಿಸಲು ಪೋಕ್ಸೋ ಕಾಯ್ದೆಗೆ ತಿದ್ದುಪಡಿ: ಮನೇಕಾ ಗಾಂಧಿ
ಮನೇಕಾ ಗಾಂಧಿ
Published On :

ನವದೆಹಲಿ : ಜಮ್ಮು- ಕಾಶ್ಮೀರದಲ್ಲಿನ ಕಥುವಾದಲ್ಲಿ ಅಪ್ರಾಪ್ತ ಬಾಲಕಿ ಮೇಲಿನ  ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಈ  ಬೆನ್ನಲ್ಲೇ   ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಮರಣ ದಂಡನೆ ವಿಧಿಸುವ ಸುಲವಾಗಿ ಪೋಕ್ಸೋ  ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು  ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಮನೇಕಾ ಗಾಂಧಿ ಹೇಳಿದ್ದಾರೆ.

ಕುಥುವಾ ಅತ್ಯಾಚಾರ ಪ್ರಕರಣ ಸೇರಿದಂತೆ ಇತ್ತೀಚಿಗೆ ಮಕ್ಕಳ ಮೇಲಾಗುತ್ತಿರುವ ಲೈಂಗಿಕ  ದೌರ್ಜನ್ಯ ಪ್ರಕರಣಗಳು ತಮ್ಮನ್ನು ತುಂಬಾ  ಘಾಸಿಗೊಳಿದ್ದು,  12 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸುವರಿಗೆ ಮರಣ ದಂಡನೆ ವಿಧಿಸಲು ಪೋಕ್ಸೋ ಕಾಯ್ದೆಗೆ ತಿದ್ದುಪಡಿ ತರಲು ಗಮನ ಹರಿಸಲಾಗಿದೆ ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

ಜ. ತಿಂಗಳಲ್ಲಿ ರಾಸನಾ ಗ್ರಾಮದಲ್ಲಿನ  ನಡೆದಿದ್ದ 8 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಂಜಿರಾಮ್ ಸೇರಿದಂತೆ 8 ಆರೋಪಿಗಳನ್ನು ಬಂಧಿಸಲಾಗಿದೆ.

ಮುಸ್ಲಿಂ ಸಮುದಾಯದ ಬಾಲಕಿ ಮಸೀದಿ ಬಳಿ ಬಂದಿದ್ದಾಗ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ ಹತ್ಯೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿಗಳು ಬಾಯ್ಟಿಟ್ಟಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.