ಕತುವಾ ಅತ್ಯಾಚಾರ ಸಂತ್ರಸ್ತೆ ಸತ್ತಿದ್ದು ಒಳ್ಳೆಯದೇ ಆಯಿತು ಎಂದ ಬ್ಯಾಂಕ್ ಅಧಿಕಾರಿ ವಜಾ
ಜಮ್ಮು ಮತ್ತು ಕಾಶ್ಮೀರದ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಸಮರ್ಥಿಸಿ ಕೇರಳದ ಕೋಟಕ್ ಮಹಿಂದ್ರಾ ಬ್ಯಾಂಕ್ ನೌಕರನೋರ್ವ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು...

Published On :
ತಿರುವನಂತಪುರ; ಜಮ್ಮು ಮತ್ತು ಕಾಶ್ಮೀರದ ಬಾಲಕಿ ಅತ್ಯಾಚಾರ ಮತ್ತು ಹತ್ಯೆ ಸಮರ್ಥಿಸಿ ಕೇರಳದ ಕೋಟಕ್ ಮಹಿಂದ್ರಾ ಬ್ಯಾಂಕ್ ನೌಕರನೋರ್ವ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು.
ಕತುವಾ ಅತ್ಯಾಚಾರ ಪ್ರಕರಣ ಕುರಿತಂತೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಗೋಡೆಯಲ್ಲಿ ಬಾಂಕ್ಯ್ ನ ಸಹಾಯಕ ಮ್ಯಾನೇಜರ್ ಆಗಿದ್ದ ನಂದಾ ಕುಮಾರ್ ಎಂಬುವವರು ಬರೆದುಕೊಂಡಿದ್ದರು. ಕತುವಾ ಬಾಲಕಿ ಹತ್ಯೆ ಒಳ್ಳೆಯದೇ. ಇಲ್ಲದಿದ್ದರೆ ನಾಳೆ ಆಕೆ ಭಾರತಕ್ಕೆ ಬಾಂಬ್ ಹಾಕುತ್ತಿದ್ದಳು ಎಂದು ಹೇಳಿದ್ದರು.
ಈ ಹೇಳಿಕೆ ತೀವ್ರ ವಿರೋಧಕ್ಕೆ ಕಾರಣವಾಗಿತ್ತು. ಬಳಿಕ ಡಿಸ್ಮಿಸ್ ಯುವರ್ ಮ್ಯಾನೇಜರ್ ಎಂಬ ಹ್ಯಾಷ್ ಟ್ಯಾಗ್ ನಡಿ ಸಾಕಷ್ಟು ಮಂದಿ ಕೋಟಕ್ ಬ್ಯಾಂಕ್'ಗೆ ಆಗ್ರಹಿಸಿದ್ದರು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಬ್ಯಾಂಕ್ ಇದೀಗ ನಂದಾ ಕುಮಾರ್ ಅವರನ್ನು ವಜಾಗೊಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಕೆಲಸJobಬ್ಯಾಂಕ್ ಮ್ಯಾನೇಜರ್ಕತುವಾ ಸಾಮೂಹಿಕ ಅತ್ಯಾಚಾರ ಪ್ರಕರಣKathua gang rape caseBank managerKotak mahendra bankಕೋಟಕ್ ಮಹಿಂದ್ರ ಬ್ಯಾಂಕ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


