ಬುಡಕಟ್ಟು ಮಹಿಳೆಗೆ ಸ್ವತಃ ಪಾದರಕ್ಷೆ ತೊಡಿಸಿದ ಪ್ರಧಾನಿ ಮೋದಿ: ವಿಡಿಯೋ ವೈರಲ್!
ಚತ್ತೀಸ್ ಗಢದ ಬೈಲಾಸ್ ಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಚರಣ್-ಪಾದುಕಾ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಆದಿವಾಸಿ(ಬುಡಕಟ್ಟು) ಮಹಿಳೆಯೊಬ್ಬರಿಗೆ ಸ್ವತಃ ತಾವೇ ಪಾದರಕ್ಷೆ

Published On :
ರಾಯ್ ಪುರ: ತಮ್ಮ ಸಿಬ್ಬಂದಿಗಳಿಂದ ಪಾದರಕ್ಷೆಗಳನ್ನು ತೊಡಿಸಿಕೊಳ್ಳುವ ಅಧಿಕಾರದಿಂದ ಮೆರೆಯುವ ರಾಜಕಾರಣಿಗಳನ್ನು ನಾವು ನೋಡಿದ್ದೇವೆ. ಆದರೆ ಪ್ರಧಾನಿ ನರೇಂದ್ರ ಮೋದಿ ಇದಕ್ಕೆ ತದ್ವಿರುದ್ಧ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ನಾನು ಪ್ರಧಾನಿ ಅಲ್ಲ ಪ್ರಧಾನ ಸೇವಕ ಎನ್ನುವ ಮೋದಿ ಈಗೇನು ಮಾಡದ್ರಪ್ಪಾ ಅಂದ್ರೆ, ಚತ್ತೀಸ್ ಗಢದ ಬೈಲಾಸ್ ಪುರಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಚರಣ್-ಪಾದುಕಾ ಯೋಜನೆಗೆ ಚಾಲನೆ ನೀಡಿದ್ದಾರೆ. ಈ ವೇಳೆ ಆದಿವಾಸಿ(ಬುಡಕಟ್ಟು) ಮಹಿಳೆಯೊಬ್ಬರಿಗೆ ಸ್ವತಃ ತಾವೇ ಪಾದರಕ್ಷೆ ತೊಡಿಸಿದ್ದಾರೆ.
ಚತ್ತೀಸ್ ಗಢದಲ್ಲಿರುವ ಆದಿವಾಸಿ ಮಹಿಳೆಯರು ತೆಂಡು ಎಲೆ ಕೀಳುವುದಕ್ಕಾಗಿ ಕಾಡುಗಳಲ್ಲಿ ಓಡಾಡುತ್ತಾರೆ, ಆದರೆ ಹಲವು ಬಾರಿ ಅವರ ಬಳಿ ಪಾದರಕ್ಷೆ ಇರುವುದಿಲ್ಲ, ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಆದಿವಾಸಿ(ಬುಡಕಟ್ಟು) ಮಹಿಳೆಯರಿಗೆ ಪಾದರಕ್ಷೆಗಳನ್ನು ನೀಡುವುದಕ್ಕಾಗಿ ಚರಣ್-ಪಾದಿಕಾ ಯೋಜನೆ ಜಾರಿಗೊಳಿಸಿದೆ. ಯೋಜನೆ ಉದ್ಘಾಟಿಸಿದ ಪ್ರಧಾನಿ ಮೋದಿ ಸ್ವತಃ ಸ್ವತಃ ತಾವೇ ಪಾದರಕ್ಷೆ ತೊಡಿಸಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.
ಕಾರ್ಯಕ್ರಮದಲ್ಲಿ ಪಾದರಕ್ಷೆಗಳನ್ನು ಪಡೆದ ಮಹಿಳೆ ಸಂತಸ ವ್ಯಕ್ತಪಡಿಸಿದ್ದು, ಈ ವೇಳೆ ಚತೀಸ್ ಗಢದ ಮುಖ್ಯಮಂತ್ರಿ ರಮಣ್ ಸಿಂಗ್ ಸಹ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿಪಾದರಕ್ಷೆslippersTribal womanಬುಡಕಟ್ಟು ಮಹಿಳೆCharan-Paduka schemeಚರಣ್-ಪಾದುಕಾ ಯೋಜನೆ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


