ಒಂದೋ ಮದನಿಯನ್ನು ಬಿಡುಗಡೆ ಮಾಡಿ ಅಥವಾ ಗಲ್ಲಿಗೇರಿಸಿ: ಕೇರಳ ಸಚಿವ ಕೆಟಿ ಜಲೀಲ್
ಪಿಡಿಪಿ ನಾಯಕ ಅಬ್ದುಲ್ ನಾಸಿರ್ ಮದನಿಯ ವಿಚಾರಣೆಯನ್ನು ಕರ್ನಾಟಕ ಸರ್ಕಾರ ನಿಧಾನ ಮಾಡುತ್ತಿದ್ದು ಒಂದು ಆತನನ್ನು ಬಿಡುಗಡೆ ಮಾಡಿ ಇಲ್ಲದಿದ್ದರೆ ಗಲ್ಲಿಗೇರಿಸಿ...

Published On :
ಮಲ್ಲಾಪುರಂ: ಪಿಡಿಪಿ ನಾಯಕ ಅಬ್ದುಲ್ ನಾಸಿರ್ ಮದನಿಯ ವಿಚಾರಣೆಯನ್ನು ಕರ್ನಾಟಕ ಸರ್ಕಾರ ನಿಧಾನ ಮಾಡುತ್ತಿದ್ದು ಒಂದು ಆತನನ್ನು ಬಿಡುಗಡೆ ಮಾಡಿ ಇಲ್ಲದಿದ್ದರೆ ಗಲ್ಲಿಗೇರಿಸಿ ಎಂದು ಕೇರಳ ಸ್ಥಳೀಯಾಡಳಿತ ಖಾತೆ ಸಚಿವ ಕೆಟಿ ಜಲೀಲ್ ಹೇಳಿದ್ದಾರೆ.
ಜೀವನ ಮತ್ತು ಮರಣ ನಡುವಿನ ಚಿತ್ರಹಿಂಸೆ ಅಸಹನೀಯವಾಗಿದೆ ಎಂದು ಜಲೀಲ್ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದಾರೆ. ಕಳೆದ ಶುಕ್ರವಾರ ಬೆಂಗಳೂರಿನಲ್ಲಿ ಮದನಿಯನ್ನು ಜಲೀಲ್ ಭೇಟಿ ಮಾಡಿದ್ದರು. ಮದನಿ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಆದರೆ ಮಾನಸಿಕವಾಗಿ ಗಟ್ಟಿಯಾಗಿದ್ದಾರೆ ಎಂದು ಹೇಳಿದ್ದಾರೆ.
ಸಾಕ್ಷ್ಯಧಾರ ಕೊರತೆ ಹಿನ್ನೆಲೆಯಲ್ಲಿ ಒಂಬತ್ತು ವರ್ಷಗಳ ನಂತರ ಮದನಿಯನ್ನು ಬಿಡುಗಡೆ ಮಾಡಲಾಗಿತ್ತು. ನಂತರ ನಕಲಿ ಪ್ರಕರಣಗಳ ಮೂಲಕ ಕರ್ನಾಟಕ ಸರ್ಕಾರ ಮತ್ತೆ ಅವರನ್ನು ಬಂಧಿಯನ್ನಾಗಿಸಿ ವಿಚಾರಣೆಯನ್ನು ವಿಳಂಬ ಮಾಡುತ್ತಿದ್ದು ಇದು ಮದನಿ ಅಮಾಯಕ ಎಂಬುದನ್ನು ಸಾಬೀತುಪಡಿಸುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


