ದೇಶ

ಕತುವಾ ಪ್ರಕರಣ: ನಾವು ಅಪರಾಧಿಗಳಲ್ಲ, ಮಂಪರು ಪರೀಕ್ಷೆ ಮಾಡಿ- ನ್ಯಾಯಾಲಯದಲ್ಲಿ ಆರೋಪಿಗಳ ಮನವಿ

ನಾವು ಅಪರಾಧಿಗಳಲ್ಲ, ಬೇಕಿದ್ದರೆ ನಮ್ಮನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಕತುವಾ ಅತ್ಯಾಚಾರ ಪ್ರಕರಣಗದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ...

ಕತುವಾ ಪ್ರಕರಣ: ನಾವು ಅಪರಾಧಿಗಳಲ್ಲ, ಮಂಪರು ಪರೀಕ್ಷೆ ಮಾಡಿ- ನ್ಯಾಯಾಲಯದಲ್ಲಿ ಆರೋಪಿಗಳ ಮನವಿ
ಸಾಂದರ್ಭಿಕ ಚಿತ್ರ
Published On :
ಕತುವಾ: ನಾವು ಅಪರಾಧಿಗಳಲ್ಲ, ಬೇಕಿದ್ದರೆ ನಮ್ಮನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಎಂದು ಕತುವಾ ಅತ್ಯಾಚಾರ ಪ್ರಕರಣಗದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ನ್ಯಾಯಾಲಯದ ಮುಂದೆ ಮನವಿ ಮಾಡಿಕೊಂಡಿದ್ದಾರೆಂದು ಸೋಮವಾರ ತಿಳಿದುಬಂದಿದೆ. 
ಕತುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಈ ವರೆಗೂ 8 ಮಂದಿ ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದು, ಇದರಲ್ಲಿ ಓರ್ವ ಬಾಲಾಪರಾಧಿಯಾಗಿದ್ದಾನೆ. ಬಂಧನಕ್ಕೊಳಗಾಗಿರುವ ಎಲ್ಲಾ ಆರೋಪಿಗಳನ್ನು ಇಂದು ಅಧಿಕಾರಿಘಲು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. 
ವಿಚಾರಣೆ ನಡೆಸಿದ್ದ ನ್ಯಾಯಾಲಯವು ಎಲ್ಲಾ ಆರೋಪಿಗಳ ವಿರುದ್ಧ ಸಲ್ಲಿಸಲಾಗಿರುವ ಚಾರ್ಜ್ ಶೀಟ್ ಗಳ ಪ್ರತಿಯನ್ನು ಸಲ್ಲಿಸುವಂತೆ ಸೂಚಿಸಿದ್ದು, ಮುಂದಿನ ವಿಚಾರಣೆಯನ್ನು ಏ.28ಕ್ಕೆ ನಡೆಸುವುದಾಗಿ ತಿಳಿಸಿದೆ. 
ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ಮುಂದೆ ಮಾತನಾಡಿರುವ ಆರೋಪಿಗಳು, ನಾವು ಅಪರಾಧಿಗಳಲ್ಲ. ಬೇಕಿದ್ದರೆ ನಮ್ಮನ್ನು ಮಂಪರು ಪರೀಕ್ಷೆಗೆ ಒಳಪಡಿಸಿ ಒಂದು ಬೇಡಿಕೊಂಡಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.