ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ: ಮೇ 2ರವರೆಗೆ ಕಾರ್ತಿ ಚಿದಂಬರಂ ಬಂಧನವಿಲ್ಲ
ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ ಸಂಬ್ಂಧ ಸಿಬಿಐ ಮತ್ತು ಇಡಿ ಕಾರ್ತಿ ಚಿದಂಬರಂ ಬಂಧನಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಮೇ 2 ರವರೆಗೆ...
Published On :
ನವದೆಹಲಿ: ಏರ್ಸೆಲ್-ಮ್ಯಾಕ್ಸಿಸ್ ಪ್ರಕರಣ ಸಂಬ್ಂಧ ಸಿಬಿಐ ಮತ್ತು ಇಡಿ ಕಾರ್ತಿ ಚಿದಂಬರಂ ಬಂಧನಕ್ಕೆ ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿರುವ ದೆಹಲಿ ನ್ಯಾಯಾಲಯ ಮೇ 2 ರವರೆಗೆ ಅವರನ್ನು ಬಂಧಿಸದಂತೆ ಮಧ್ಯಂತರ ತಡೆ ನಿಡಿದೆ.
ಜಾರಿ ನಿರ್ದೇಶನಾಲಯದ ವಾದ ಆಲಿಸಿದ ಬಳಿಕ ವಿಶೇಷ ನ್ಯಾಯಾಧೀಶ ಒ.ಪಿ. ಸೈನಿ ಹಿರಿಯ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ ಅವರ ಪುತ್ರನಿಗೆ ತಾತ್ಕಾಲಿಕ ಪರಿಹಾರ ನಿಡಿದ್ದಾರೆ.
ಇದಕ್ಕೂ ಮುನ್ನ ಮಾರ್ಚ್ 24 ರಂದು ನ್ಯಾಯಾಲಯವು ಕಾರ್ತಿ ಅವರ ಬಂಧನಕ್ಕೆ ಇಂದಿನವರೆಗೆ (ಏ.16) ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿತ್ತು. ತನಿಖಾ ಏಜೆನ್ಸಿಗಳು ಕಾರ್ತಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯ ಮೇಲೆ ತಮ್ಮ ಪ್ರತಿಕ್ರಿಯೆಗಳನ್ನು ಸಲ್ಲಿಸಲು ಸಮಯ ಕೇಳಿದ್ದವು.
ಏರ್ಟೆಲ್-ಮ್ಯಾಕ್ಸಿಸ್ ಪ್ರಕರಣದಲ್ಲಿ ಬಂಧನದಿಂದ ರಕ್ಷಣೆ ಕೋರಿ ಕಾರ್ತಿ ಚಿದಂಬರಂ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. 2011 ಮತ್ತು 2012 ರಲ್ಲಿ ನಡೆದಿದ್ದ ಅವ್ಯವಹಾರ ಸಂಬಂಧ ಸಿಬಿಐ ಮತ್ತು ಇಡಿ ಕಾಂಗ್ರೆಸ್ ನಾಯಕನ ಪುತ್ರನ ವಿರುದ್ಧ ಪ್ರಕರಣಗಳನ್ನು ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

