ರಾಮ ದೇಗುಲ ನಿರ್ಮಾಣವಾಗದೇ ಹೋದರೆ ಭಾರತೀಯ ಸಂಸ್ಕೃತಿ ಮೂಲ ಕಡಿದು ಹೋಗುತ್ತದೆ: ಭಾಗವಾತ್
ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣವಾಗದೇ ಹೋದರೆ, ಭಾರತೀಯ ಸಂಸ್ಕೃತಿಯ ಮೂಲ ಕಡಿದು ಹೋಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಧ್ಯಕ್ಷ ಮೋಹನ್ ಭಾಗವತ್ ಅವರು ಸೋಮವಾರ ಹೇಳಿದ್ದಾರೆ...

Published On :
ಪಲ್ಘಾರ್ (ಮಹಾರಾಷ್ಟ್ರ): ಅಯೋಧ್ಯೆಯಲ್ಲಿ ರಾಮ ಮಂದಿನ ನಿರ್ಮಾಣವಾಗದೇ ಹೋದರೆ, ಭಾರತೀಯ ಸಂಸ್ಕೃತಿಯ ಮೂಲ ಕಡಿದು ಹೋಗುತ್ತದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಧ್ಯಕ್ಷ ಮೋಹನ್ ಭಾಗವತ್ ಅವರು ಸೋಮವಾರ ಹೇಳಿದ್ದಾರೆ.
ಪಲ್ಘಾರ್ ಜಿಲ್ಲೆಯಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿರುವ ಅವರು, ಹೊರಗಿನಿಂದ ಭಾರತದೊಳಗೆ ಪ್ರವೇಶ ಮಾಡಿದ್ದ ಮುಸ್ಲಿಮರು ರಾಮ ದೇಗಲುವನ್ನು ಧ್ವಂಸಗೊಳಿಸಿದ್ದರು. ಇದೀಗ ಮತ್ತೆ ಆ ಸ್ಥಳದಲ್ಲಿ ದೇವಾಲಯ ನಿರ್ಮಾಣ ಮಾಡುವುದು ಜನರ ಜವಾಬ್ದಾರಿಯಾಗಿದೆ ಎಂದು ಹೇಳಿದ್ದಾರೆ.
ಅಯೋಧ್ಯೆಯಲ್ಲಿದ್ದ ರಾಮ ಮಂದಿರವನ್ನು ಮುಸ್ಲಿಂ ಸಮುದಾಗ ಧ್ವಂಸಗೊಳಿಸಿತ್ತು. ಆದರೆ, ಮಸೀದಿ ಕೆಡವುವ ಕೆಲಸವನ್ನು ಭಾರತೀಯರು ಎಂದಿಗೂ ಮಾಡುವುದಿಲ್ಲ. ಅಯೋಧ್ಯೆಯಲ್ಲಿ ಧ್ವಂಸಗೊಳಿಸಲಾಗಿದ್ದ ರಾಮ ಮಂದಿರವನ್ನು ಮತ್ತೆ ಅದೇ ಸ್ಥಳದಲ್ಲಿ ನಿರ್ಮಾಣ ಮಾಡುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ಹೋರಾಡಲು ನಾವು ಸಿದ್ಧ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


