ಕೃಷ್ಣಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ವಿದೇಶ ಪ್ರಯಾಣಕ್ಕೆ ನ್ಯಾಯಾಲಯ ಅನುಮತಿ
ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿದೇಶಕ್ಕೆ ತೆರಳಲು ಜೋಧಪುರ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದೆ.

Published On :
ನವದೆಹಲಿ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಾಲಿವುಡ್ ನಟ ಸಲ್ಮಾನ್ ಖಾನ್ ವಿದೇಶಕ್ಕೆ ತೆರಳಲು ಜೋಧಪುರ್ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಅನುಮತಿ ನೀಡಿದೆ.
ಬಾಲಿವುಡ್ ನಟ ಸಲ್ಮಾನ್ ಖಾನ್ ಮೇ 25 ರಿಂದ 10 ಜುಲೈ ವರೆಗೆ ಕೆನಡಾ, ನೇಪಾಳ ಮತ್ತು ಯುಎಸ್ಎ ಸೇರಿದಂತೆ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಜೋಧಪುರ್ ನ್ಯಾಯಾಲಯಕ್ಕೆ ಮನವಿ ಸಲ್ಲಿಇಸಿದ್ದರು.
1998ರಲ್ಲಿ ’ಹಮ್ ಸಾಥ್ ಸಾಥ್ ಹೈ’ ಚಿತ್ರೀಕರಣದಲ್ಲಿ ತೊಡಗಿದ್ದ ವೇಳೆ ನಟ ಸಲ್ಮಾನ್ ಖಾನ್ ಜೋಧಪುರ್ ದಲ್ಲಿ ಎರಡು .ಕೃಷ್ಣಮೃಗಗಲನ್ನು ಕಾನೂನು ಬಾಹಿರವಾಗಿ ಬೇಟೆಯಾಡಿದ್ದರು. ಪ್ರಕರಣದಲ್ಲಿ ಸಲ್ಮಾನ್ ಗೆ 5 ವರ್ಷಗಳ ಜೈಲು ಶಿಕ್ಷೆ ಯಾಗಿತ್ತು.
ಶಿಕ್ಷೆಯಾದ ಬಳಿಕ ಎರಡು ದಿನಗಳ ಕಾಲ ಜೋಧಪುರ್ ಜೈಲಿನಲ್ಲಿ ಕಳೆದಿದ್ದ ನಟ ಜಾಮೀನಿನ ಮೇಲೆ ಹೊರಬಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Salman Khanಸಲ್ಮಾನ್ ಖಾನ್ವಿದೇಶ ಪ್ರವಾಸJodhpur courtಜೋಧಪುರ್ ಕೋರ್ಟ್Blackbuck Caseಕೃಷ್ಣಮೃಗ ಬೇಟೆ ಪ್ರಕರಣabroad travel
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


