ದೇಶ

ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ನೋವು, ಅಸಹಾಯಕತೆ ವ್ಯಕ್ತಪಡಿಸಿದ ಮೇರಿ ಕೋಮ್

ದೇಶದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಹೆಸರಾಂತ ಬಾಕ್ಸರ್ , ರಾಜ್ಯಸಭಾ ಸದಸ್ಯೆ ಮೇರಿ ಕೋಮ್, ನೋವು ಹಾಗೂ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ನೋವು, ಅಸಹಾಯಕತೆ ವ್ಯಕ್ತಪಡಿಸಿದ ಮೇರಿ ಕೋಮ್
ಮೇರಿ ಕೋಮ್
Published On :

ನವದೆಹಲಿ : ದೇಶದಲ್ಲಿ ಹೆಚ್ಚಾಗುತ್ತಿರುವ ಅತ್ಯಾಚಾರ ಪ್ರಕರಣಗಳ ಬಗ್ಗೆ ಹೆಸರಾಂತ ಬಾಕ್ಸರ್  , ರಾಜ್ಯಸಭಾ ಸದಸ್ಯೆ ಮೇರಿ ಕೋಮ್, ನೋವು ಹಾಗೂ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

2012ರಲ್ಲಿ ನಡೆದಿದ್ದ ನಿರ್ಭಯಾ ಅತ್ಯಾಚಾರ ನಂತರ ಕತುವಾ ಹಾಗೂ ಉನ್ನಾವೊ ಅತ್ಯಾಚಾರ ಪ್ರಕರಣಗಳು ದೇಶವನ್ನು ಬೆಚ್ಚಿ ಬೀಳಿಸಿದ್ದು, ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿರುವುದು   ಮಹಿಳೆಯಾಗಿ ತಮ್ಮಗೆ ಅತೀವ ನೋವುಂಟುಮಾಡಿದೆ. ಭಾರತೀಯಳಾಗಿ ಇದರ ಬಗ್ಗೆ ದು:ಖವಾಗುತ್ತಿದ್ದು, ಅಸಹಾಯಕತೆ ಮನೋಭಾವ ಕಾಡುತ್ತಿದೆ ಎಂದು ಅವರು ಹೇಳಿದ್ದಾರೆ.

 ತಪಿತಸ್ಥರ ವಿರುದ್ಧ ಸರ್ಕಾರ  ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮೇರಿ ಕೋಮ್ ಗೋಲ್ಟ್ ಕೋಸ್ಟ್ ನಿಂದ ಹಿಂದಿರುಗಿದ  ಬಳಿಕ  ಟಿವಿ ಚಾನೆಲ್ ವೊಂದಕ್ಕೆ ನೀಡಿದ  ಸಂದರ್ಶನದಲ್ಲಿ ತಿಳಿಸಿದ್ದಾರೆ.

 ಜಮ್ಮು-ಕಾಶ್ಮೀರದ ಕತುವಾದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದರೆ, ಉತ್ತರ ಪ್ರದೇಶದ ಉನ್ನಾವೊದಲ್ಲಿ  ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇರೆಗೆ  ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ನನ್ನು ಪೊಲೀಸರು ಬಂಧಿಸಿದ್ದಾರೆ.




Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.