ಅಮೆರಿಕಾದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಕುಟುಂಬದ ಮೂವರು ಸದಸ್ಯರ ಮೃತದೇಹ ನದಿಯಲ್ಲಿ ಪತ್ತೆ
ಅಮೆರಿಕದಲ್ಲಿ ನಾಲ್ವರು ಭಾರತೀಯರ ಕುಟುಂಬವೊಂದು ಕಳೆದ ವಾರ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ನದಿಯೊಂದರಲ್ಲಿ ಕಾರಿನಲ್ಲಿ ಮೂವರ ಶವಗಳು ...

Published On :
ವಾಷಿಂಗ್ಟನ್: ಅಮೆರಿಕದಲ್ಲಿ ನಾಲ್ವರು ಭಾರತೀಯರ ಕುಟುಂಬವೊಂದು ಕಳೆದ ವಾರ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟದ ಬಳಿಕ ನದಿಯೊಂದರಲ್ಲಿ ಕಾರಿನಲ್ಲಿ ಮೂವರ ಶವಗಳು ಪತ್ತೆಯಾಗಿವೆ.
ಇಯೆಲ್ ನದಿಯಲ್ಲಿ ಇಬ್ಬರ ಶವ ಎಸ್ ಯುವಿ ಕಾರಿನಲ್ಲಿ ಪತ್ತೆಯಾಗಿದ್ದು, ತನಿಖೆ ವೇಳೆ ಶವಗಳು ಸಂದೀಪ್ ತೊಟ್ಟಿಪಿಲ್ಲಿ ಮತ್ತು ಅವರ 9 ವರ್ಷದ ಪುತ್ರಿ ಸಾಚಿ ಯದ್ದು ಎಂದು ವಾಷಿಂಗ್ಟನ್ ಪೋಸ್ಟ್‌ನ ವರದಿ ಮಾಡಿದೆ.
ಒರೆಗಾನ್‌ದಿಂದ ಕ್ಯಾಲಿಫೋರ್ನಿಯಾಕ್ಕೆ ಎಸ್ ಯುವಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಸಂದೀಪ್ ತೊಟ್ಟಪಿಲ್ಲಿ ಕುಟುಂಬದ ನಾಲ್ವರು ನಾಪತ್ತೆಯಾಗಿದ್ದರು. ಸಂದೀಪ್ ಮತ್ತು ಪುತ್ರಿಯ ಶವ ಪತ್ತೆಯಾಗುವ 2 ದಿನ ಮುನ್ನ ಪತ್ನಿ ಸೌಮ್ಯ ಶವವೂ ಪೊಲೀಸರಿಗೆ ಸಿಕ್ಕಿತ್ತು,. ಆದರೆ ಪುತ್ರ ಸಿದ್ಧಾಂತ್ ಎಲ್ಲಿದ್ದಾನೆ ಎಂಬುದು ತಿಳಿದು ಬಂದಿಲ್ಲ.
ಸರಿಸುಮಾರಾಗಿ ಬೆಳ್ಳಿಗ್ಗೆ 11:30 ರಲ್ಲಿ ಬೋಟಿಂಗ್ ತಂಡದ ಸದಸ್ಯರು ವರದಿ ಮಾಡಿದ ಕ್ರ್ಯಾಶ್ ಸೈಟ್ (ಡೌನ್ಸ್ಟ್ರೀಮ್) ನ ಉತ್ತರದಲ್ಲಿ ಸುಮಾರು 1/2 ಮೈಲುಗಳಷ್ಟು ನೀರು ಹೊರಸೂಸುವ ಗ್ಯಾಸೋಲಿನ್ ವಾಸನೆಯನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶೋಧಕರು ನದಿಯಲ್ಲಿ ತನಿಖೆ ಮಾಡಲು ಪ್ರಾರಂಭಿಸಿದಾಗ ನೀರಿನ ಕೆಳಗೆ ಸುಮಾರು 4-6 ಅಡಿಗಳಷ್ಟು ಮುಳುಗಿಹೋದ ವಾಹನವನ್ನು ಪತ್ತೆಯಾಗಿದೆ"ಎಂದು ಕ್ಯಾಲಿಫೋರ್ನಿಯಾದ ಮೆಂಡೋಸಿನೊ ಕೌಂಟಿ ಶೆರಿಫ್ಸ್ ಆಫೀಸ್ ಹೇಳಿಕೆಯಲ್ಲಿ ತಿಳಿಸಿದೆ.
ಸ್ಯಾನ್ ಜೋಸ್ ಆರಕ್ಷಕ ಇಲಾಖೆಯ ಪ್ರಕಾರ, ಏಪ್ರಿಲ್ 6 ರಂದು ಸ್ಯಾನ್ ಜೋಸ್ ಪ್ರದೇಶದಲ್ಲಿ ಸ್ನೇಹಿತರನ್ನು ಭೇಟಿ ಮಾಡಲು ತೋಟಪಲ್ಲಿ ಕುಟುಂಬವು ಆಗಮಿಸಬೇಕಾಗಿತ್ತು .
ಈ ಕುರಿತಾಗಿ ಪೊಲೀಸರು ಉನ್ನತ ಮಟ್ಟದ ತನಿಖೆ ನಡೆಸುತ್ತಿದ್ದು ಸಾವಿಗೆ ಕಾರಣವೇನೆಂದು ಇನ್ನಷ್ಟೇ ತಿಳಿದು ಬರಬೇಕಿದೆ. ಸಂದೀಪ್ ಗುಜರಾತ್‌ನ ಸೂರತ್‌ನಲ್ಲಿ ಹುಟ್ಟಿ ಬೆಳೆದವರಾಗಿದ್ದು, ಅಮೆರಿಕದಲ್ಲಿ 15 ವರ್ಷಗಳಿಂದ ನೆಲೆಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


