ಕೇಸರಿ ಭಯೋತ್ಪಾದನೆ ಪದವನ್ನು ನಾವೆಂದೂ ಎಲ್ಲಿಯೂ ಬಳಸಿಲ್ಲ: ಕಾಂಗ್ರೆಸ್
ಕೇಸರಿ ಭಯೋತ್ಪಾದನೆ ಪದವನ್ನು ತಮ್ಮ ಮುಖಂಡರು ಎಲ್ಲಿಯೂ ಬಳಸಿಲ್ಲ. ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ತಳುಕು ಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ...

Published On :
ನವದೆಹಲಿ: ಕೇಸರಿ ಭಯೋತ್ಪಾದನೆ ಪದವನ್ನು ತಮ್ಮ ಮುಖಂಡರು ಎಲ್ಲಿಯೂ ಬಳಸಿಲ್ಲ. ಭಯೋತ್ಪಾದನೆಯನ್ನು ಯಾವುದೇ ಧರ್ಮಕ್ಕೆ ತಳುಕು ಹಾಕುವಂತಿಲ್ಲ ಎಂದು ಕಾಂಗ್ರೆಸ್ ಹೇಳಿದೆ.
ಬಹುಸಂಖ್ಯಾತ ಸಮುದಾಯಕ್ಕೆ ಮಸಿ ಬಳಿಯಲು ಕಾಂಗ್ರೆಸ್ ಕೇಸರಿ ಭಯೋತ್ಪಾದನೆ ಎಂಬ ಪದವನ್ನು ಸೃಷ್ಟಿಸಿದೆ ಎಂದು ಬಿಜೆಪಿ ಆರೋಪಿಸಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಈ ಸ್ಫಷ್ಟನೆ ನೀಡಿದೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಥವಾ ಬೇರೆ ಯಾವ ಕಾಂಗ್ರೆಸ್ ನಾಯಕನು ಕೇಸರಿ ಭಯೋತ್ಪಾದನೆ ಎಂಬ ಪದ ಬಳಸಿದ ವಿಡಿಯೋ ಅಥವಾ ಧ್ವನಿ ಸುರುಳಿ ಇದ್ದರೆ ತೋರಿಸಿ. ಕೇಸರಿ ಭಯೋತ್ಪಾದನೆ ಎಂಬುದು ಇಲ್ಲವೇ ಇಲ್ಲ ಎಂದು ಎಐಸಿಸಿ ವಕ್ತಾರ ಪಿಎಲ್ ಪುನಿಯಾ ಪ್ರತಿಕ್ರಿಯಿಸಿದ್ದಾರೆ.
ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ರಾಜ್ಯಸಭೆಯಲ್ಲಿ ಎನ್ಐಎ ಕಾರ್ಯವೈಖರಿಯನ್ನು ಪ್ರಶ್ನಿಸಿದರು. ನಾಲ್ಕು ವರ್ಷಗಳ ಹಿಂದೆ ಹೊಸ ಸರ್ಕಾರ ರಚನೆಯಾದ ಬಳಿಕ ಸಾಲು ಸಾಲಾಗಿ ಎಲ್ಲ ಪ್ರಕರಣಗಳಲ್ಲೂ ಆರೋಪಿಗಳ ಖುಲಾಸೆ ಆಗುತ್ತಿದೆ. ಹೀಗಾದರೆ ಇಂತಹ ತನಿಖಾ ಸಂಸ್ಥೆಗಳ ಬಗ್ಗೆ ಜನತೆ ವಿಶ್ವಾಸ ಕಳೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


