ದೇಶ

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ನದಿಗೆ ಉರುಳಿಬಿದ್ದ ಮಿನಿ ಟ್ರಕ್, 21 ಸಾವು, 30 ಜನರಿಗೆ ಗಾಯ

ಮಿನಿ ಟ್ರಕ್ ವೊಂದು ನದಿಗೆ ಉರುಳಿಬಿದ್ದಿ ಪರಿಣಾಮ ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿ, 30ಕ್ಕೂ ಅಧಿಕ ಜನರಿಗೆ ಗಾಯವಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಅಮೆಲಿಯಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ...

ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ನದಿಗೆ ಉರುಳಿಬಿದ್ದ ಮಿನಿ ಟ್ರಕ್, 21 ಸಾವು, 30 ಜನರಿಗೆ ಗಾಯ
ಮಧ್ಯಪ್ರದೇಶದಲ್ಲಿ ಭೀಕರ ಅಪಘಾತ: ನದಿಗೆ ಉರುಳಿಬಿದ್ದ ಮಿನಿ ಟ್ರಕ್, 21 ಸಾವು, 30 ಜನರಿಗೆ ಗಾಯ
Published On :
ಭೋಪಾಲ್: ಮಿನಿ ಟ್ರಕ್ ವೊಂದು ನದಿಗೆ ಉರುಳಿಬಿದ್ದಿ ಪರಿಣಾಮ ಘಟನೆಯಲ್ಲಿ 21 ಮಂದಿ ಸಾವನ್ನಪ್ಪಿ, 30ಕ್ಕೂ ಅಧಿಕ ಜನರಿಗೆ ಗಾಯವಾಗಿರುವ ಘಟನೆ ಮಧ್ಯಪ್ರದೇಶದ ಸಿಧಿ ಜಿಲ್ಲೆಯ ಅಮೆಲಿಯಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದಿದೆ. 
ಮದುವೆ ಸಮಾರಂಭಕ್ಕೆ ತೆರಳುವ ಸಲುವಾಗಿ 45 ಜನರನ್ನು ಹೊತ್ತೊಯ್ಯುತ್ತಿದ್ದ ಮಿನಿ ಟ್ರಂಕ್ ವೊಂದು ಸಿಂಗ್ರೌಲಿ ಜಿಲ್ಲೆಯಿಂದ ಸಿಧಿ ಜಿಲ್ಲೆಗೆ ಬರುತ್ತಿತ್ತು. ಈ ವೇಳೆ ಟ್ರಕ್ ಮೇಲಿನ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾನೆ. ಈ ವೇಳೆ ದುರ್ಘಟನೆ ಸಂಭವಿಸಿದೆ. 
ಸುದ್ದಿ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ಆರಂಭಿಸಿದ್ದಾರೆಂದು ತಿಳಿದುಬಂದಿದೆ. 
ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಮಧ್ಯಪ್ರದೇಶ ಮುಖ್ಯಮಂತ್ರಿು ಶಿವರಾಜ್ ಸಿಂಗ್ ಚೌಹಾಣ್ ಅವರು, ಮೃತರ ಕುಟುಂಬಕ್ಕೆ ರೂ.2 ಲಕ್ಷ ಪರಿಹಾರ ಹಾಗೂ ಗಾಯಾಳುಗಳಿಗೆ ರೂ.50,000 ಪರಿಹಾರ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.