ದೇಶ

ವಿವಿ ಲೈಂಗಿಕ ಹಗರಣ : ತಮಿಳುನಾಡಿನ ರಾಜ್ಯಪಾಲರನ್ನು ವಾಪಾಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಡಿಎಂಕೆ ಪ್ರತಿಭಟನೆ

ಮಧುರೈನ ಕಾಮರಾಜ ವಿಶ್ವವಿದ್ಯಾಲಯದ ಲೈಂಗಿಕ ಹಗರಣಕ್ಕೆ ಸಂಬಂಧ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಕೇಂದ್ರಸರ್ಕಾರ ವಾಪಾಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ವಿವಿ ಲೈಂಗಿಕ ಹಗರಣ : ತಮಿಳುನಾಡಿನ ರಾಜ್ಯಪಾಲರನ್ನು ವಾಪಾಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಡಿಎಂಕೆ ಪ್ರತಿಭಟನೆ
ತಮಿಳುನಾಡು ರಾಜ್ಯಪಾಲ
Published On :

ಚೆನ್ನೈ : ಮಧುರೈನ  ಕಾಮರಾಜ ವಿಶ್ವವಿದ್ಯಾಲಯದ ಲೈಂಗಿಕ ಹಗರಣಕ್ಕೆ ಸಂಬಂಧ ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಅವರನ್ನು ಕೇಂದ್ರಸರ್ಕಾರ ವಾಪಾಸ್ ಕರೆಯಿಸಿಕೊಳ್ಳುವಂತೆ ಆಗ್ರಹಿಸಿ ಇಲ್ಲಿನ ಸೈದಾಪೇಟೆಯಲ್ಲಿರುವ ರಾಜಭವನ ಮುಂದೆ ಡಿಎಂಕೆ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

 ಸೈದಾಪೇಟೆಯಿಂದ ರಾಜಭವನದವರೆವಿಗೂ ಪ್ರತಿಭಟನಾ ಮೆರವಣಿಗೆ ನಡೆಸಿದ  ಪ್ರತಿಭಟನಾಕಾರರು ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಚಿನ್ನಮಲೈನ ನ್ಯಾಯಾಲಯದ ಬಳಿ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿಎಂಕೆ ಶಾಸಕ ಮಾ. ಸುಬ್ರಮಣಿಯನ್, ಸಂವಿಧಾನದ ತತ್ವಗಳನ್ನು ರಾಜ್ಯಪಾಲರು ಉಲ್ಲಂಘಿಸಿದ್ದು, ಕೂಡಲೇ ಅವರನ್ನು ಕೇಂದ್ರಸರ್ಕಾರ ವಾಪಾಸ್ ಕರೆಯಿಸಿಕೊಳ್ಳಬೇಕೆಂದು ಆಗ್ರಹಿಸಿದರು.

 ರಾಜ್ಯಪಾಲರ ಮೇಲೆಯೇ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಅವರೇ ತನಿಖೆಗೆ ಆದೇಶಿಸುವುದು ಸೂಕ್ತವಲ್ಲಾ, ಅವರನ್ನು ತಮಿಳುನಾಡಿನಿಂದ ಹಿಂದಕ್ಕೆ ಕರೆಸಿಕೊಳ್ಳುವಂತೆ ಒತ್ತಾಯಿಸಿದರು.

ಮಧುರೈ ಕಾಮರಾಜ್‌ ವಿಶ್ವವಿದ್ಯಾಲಯ ದ ಉನ್ನತ ಅಧಿಕಾರಿಗಳ ಜತೆ ಹಾಸಿಗೆ ಹಂಚಿಕೊಂಡಲ್ಲಿ, ಅಂಥ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಾಗೂ ಆರ್ಥಿಕ ಸವಲತ್ತು ನೀಡುವುದಾಗಿ ಮಹಿಳಾ ಪ್ರೊಫೆಸರ್‌ವೊಬ್ಬರು ಆಮಿಷವೊಡ್ಡಿದ್ದರು ಎಂಬ ಆರೋಪ ಕೇಳಿ ಬಂದಿತ್ತು.



Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.