ದೇಶ

ಬಿಹಾರ: ತೇಜ್ ಪ್ರತಾಪ್ ಯಾದವ್ ಮತ್ತು ಐಶ್ವರ್ಯಾ ರೈ ಅದ್ಧೂರಿ ನಿಶ್ಚಿತಾರ್ಥ

ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಮಾಜಿ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಬಿಹಾರ ಮಾಜಿ ಮುಖ್ಯಮಂತ್ರಿ ...

ಬಿಹಾರ: ತೇಜ್ ಪ್ರತಾಪ್ ಯಾದವ್ ಮತ್ತು ಐಶ್ವರ್ಯಾ ರೈ ಅದ್ಧೂರಿ ನಿಶ್ಚಿತಾರ್ಥ
ಐಶ್ವರ್ಯಾ ರೈ ಮತ್ತು ತೇಜ್ ಪ್ರತಾಪ್ ನಿಶ್ಚಿತಾರ್ಥ
Published On :
ಪಾಟ್ನಾ: ಬಿಹಾರ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ಪುತ್ರ ಹಾಗೂ ಮಾಜಿ ಆರೋಗ್ಯ ಸಚಿವ ತೇಜ್ ಪ್ರತಾಪ್ ಯಾದವ್ ಅವರು ಬಿಹಾರ ಮಾಜಿ ಮುಖ್ಯಮಂತ್ರಿ ಮೊಮ್ಮಗಳು, ಎಂಬಿಎ ಪದವೀಧರೆ ಐಶ್ವರ್ಯ ರೈ ಅವರ ನಿಶ್ಚಿತಾರ್ಥ ಇಂದು ಅದ್ದೂರಿಯಾಗಿ ಪಾಟ್ನಾದ ಮೌರ್ಯ ಹೊಟೇಲ್ ನಲ್ಲಿ ಜರುಗಿತು. 
ಎರಡು ಕುಟುಂಬದ ಸದಸ್ಯರು ಸಮಾರಂಭದಲ್ಲಿ ಭಾಗವಹಿಸಿದ್ದರು, ಆದರೆ ಲಾಲೂ ಪ್ರಸಾದ್ ಯಾದವ್ ಜೈಲಿನಲ್ಲಿರುವ ಕಾರಣ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.
ಸುಮಾರು 200 ಮಂದಿ ಸಮ್ಮುಖದಲ್ಲಿ ತೇಜ್ ಪ್ರತಾಪ್ ಮತ್ತು ಐಶ್ವರ್ಯಾ ರೈ ಪರಸ್ಪರ ಉಂಗುರ ಬದಲಾಯಿಸಿಕೊಂಡರು. ಬಿಹಾರ ಮಾಜಿ ಸಚಿವ ಚಂದ್ರಿಕಾ ಪ್ರಸಾದ್ ರೇ ಅವರ ಹಿರಿಯ ಮಗಳು ಐಶ್ವರ್ಯ ರೈ. ಮೇ 12 ರಂದು ಪಾಟ್ನಾದ ಪಶು ವೈದ್ಯಕೀಯ ಕಾಲೇಜಿನ ಮೈದಾನದಲ್ಲಿ ಇಬ್ಬರ ವಿವಾಹ ಮಹೋತ್ಸವ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.