ಉತ್ತರ ಪ್ರದೇಶ : ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಆರೋಪಿ ಬಂಧನ
ಭಯಾನಕವಾದ ಕಥುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳು ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಬಳಿಕ ಇದೀಗ ಇನ್ನೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ.

Published On :
ಸಿದ್ದಾರ್ಥನಗರ(ಉತ್ತರ ಪ್ರದೇಶ): ಭಯಾನಕವಾದ ಕಥುವಾ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳು ರಾಷ್ಟ್ರವನ್ನು ಬೆಚ್ಚಿಬೀಳಿಸಿದ ಬಳಿಕ ಇದೀಗ ಇನ್ನೊಂದು ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಸಿದ್ದಾರ್ಥನಗರದಲ್ಲಿ ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.
ಬರಾತ್ ಮೆರವಣಿಗೆ ನೋಡಲು ಮನೆಯಿಂದ ತೆರಳಿದ್ದ ಆರು ವರ್ಷದ ಬಾಲಕಿ ಮೇಲೆ ಸಿದ್ದಾರ್ಥ ನಗರ ಪ್ರದೇಶದ ಗ್ರಾಮಸ್ಥನೊಬ್ಬ ಅತ್ಯಾಚರ ನಡೆಸಿದ್ದಾನೆ.
ಆರೋಪಿಯು ಬಾಲಕಿಯನ್ನು ಖಾಲಿ ಸ್ಥಳಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಸಂತ್ರಸ್ತ ಬಾಲಕಿ ಗ್ರಾಮದ ಹೊರವಲಯದಲ್ಲಿ ಪ್ರಜ್ಞಾಹೀನಳಾಗಿ ಬಿದ್ದಿದ್ದು ಕಂಡುಬಂದಿದೆ. ಆಕೆಯನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಕಲಿಸಲಾಗಿದೆ.
ಆರೋಪಿಯನ್ನು ಪೋಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.
ಒಟ್ಟಾರೆ ಕಥುವಾ ಮತ್ತು ಉನ್ನಾವೋ ಅತ್ಯಾಚಾರ ಪ್ರಕರಣಗಳು ಮಾಸುವ ಮುನ್ನವೇ ಇನ್ನೊಂದು ಹೇಯ ಕೃತ್ಯ ನಡೆದಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Uttar pradeshಉತ್ತರ ಪ್ರದೇಶUnnao rape caseಉನ್ನಾವೋ ಅತ್ಯಾಚಾರ ಪ್ರಕರಣKathua rapeಕಥುವಾ ಅತ್ಯಾಚಾರSiddharthnagarಸಿದ್ದಾರ್ಥ ನಗರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


