ದೇಶ

ಕ್ರಿಮಿನಲ್ ಪ್ರಕರಣಗಳಲ್ಲಿ ಪಿಐಎಲ್ ಸಾಧ್ಯವೇ?: ವಕೀಲರನ್ನು ತಬ್ಬಿಬ್ಬುಗೊಳಿಸಿದ ಸುಪ್ರೀಂ ಪ್ರಶ್ನೆ

ಅತ್ಯಾಚಾರದಂತಹ ಕ್ರಿಮಿನಲ್ ಪ್ರಕರಣಗಳಲ್ಲಿ ಪಿಐಎಲ್ ಸಲ್ಲಿಸಬಹುದೇ ಎಂದು ಸುಪ್ರೀಂ ಕೋರ್ಟ್ ವಕೀಲರನ್ನು ಪ್ರಶ್ನಿಸಿದೆ.

ಕ್ರಿಮಿನಲ್ ಪ್ರಕರಣಗಳಲ್ಲಿ ಪಿಐಎಲ್ ಸಾಧ್ಯವೇ?: ವಕೀಲರನ್ನು ತಬ್ಬಿಬ್ಬುಗೊಳಿಸಿದ ಸುಪ್ರೀಂ ಪ್ರಶ್ನೆ
ಸುಪ್ರೀಂ ಕೋರ್ಟ್
Published On :
ನವದೆಹಲಿ: ಅತ್ಯಾಚಾರದಂತಹ ಕ್ರಿಮಿನಲ್ ಪ್ರಕರಣಗಳಲ್ಲಿ ಪಿಐಎಲ್ ಸಲ್ಲಿಸಬಹುದೇ ಎಂದು ಸುಪ್ರೀಂ ಕೋರ್ಟ್ ವಕೀಲರನ್ನು ಪ್ರಶ್ನಿಸಿದೆ. 
ಪ್ರಭಾವಿ ರಾಜಕಾರಣಿಗಳ ವಿರುದ್ಧ ಅತ್ಯಾಚಾರ ಆರೋಪ ಕೇಳಿಬಂದಾಗ ಪೊಲೀಸರು ಎಫ್ಐಆರ್ ಹಾಕುವುದಿಲ್ಲ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಕೋರಿ ಎಂಎಲ್ ಶರ್ಮಾ ಎಂಬುವವರು ಪಿಐಎಲ್ ಹಾಕಿದ್ದರು. ಈ ಬಗ್ಗೆ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ ನ ಎಸ್ಎ ಬಾಬ್ಡೆ ಹಾಗೂ ಎಲ್ ನಾಗೇಶ್ವರ ರಾವ್ ಅವರಿದ್ದ ಪೀಠ,  ಕ್ರಿಮಿನಲ್ ಪ್ರಕರಣಗಳಲ್ಲಿ ಪಿಐಎಲ್ ಸಲ್ಲಿಸಬಹುದೇ ಎಂದು ಪ್ರಶ್ನಿಸಿದೆ. 
ಇದೇ ವೇಳೆ  ಅತ್ಯಾಚಾರಕ್ಕೊಳಗಾದವರ ಸಂಬಂಧಿಕರು ಕೋರ್ಟ್  ಮೊರೆ ಹೋಗಿದ್ದಾರಾ?ಎಂದೂ ವಕೀಲರನ್ನು ಕೋರ್ಟ್ ಪ್ರಶ್ನಿಸಿದೆ. 
ಉನ್ನಾವೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಎಲ್ ಶರ್ಮಾ ಪಿಐಎಲ್ ದಾಖಲಿಸಿದ್ದರು. ಇದೇ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಕೋರಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಲು ಏ.11 ರಂದು ಕೋರ್ಟ್ ಒಪ್ಪಿಗೆ ಸೂಚಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.