ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ, ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ತೀರ್ಮಾನ
ಹನ್ನೆರಡು ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ....

Published On :
ನವದೆಹಲಿ: 12 ವರ್ಷದವರೆಗಿನ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸುವ ಅಪರಾಧಿಗಳನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಸ್ಕೋ) ಕಾಯ್ದೆಯಡಿ ಬಂಧಿಸಿ ಮರಣದಂಡನೆ ಜಾರಿಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮಾಹಿತಿ ನೀಡಿದ್ದು, ಏ.21 ರಂದು ಸುಗ್ರೀವಾಜ್ಞೆ ಹೊರಡಿಸುವುದರ ಬಗ್ಗೆ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಯಾಗಲಿದೆ.
0 ರಿಂದ 12 ರ ನಡುವಿನ ವಯಸ್ಸಿನ ಮಕ್ಕಳ ಅತ್ಯಾಚಾರ ಮತ್ತು ದೌರ್ಜನ್ಯದಲ್ಲಿ ಭಾಗಿಯಾಗುವ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವಂತೆ ಕೋರಿ ನ್ಯಾಯಮೂರ್ತಿ ಅಲಕ್ ಅಲೋಕ್ ಶ್ರೀವಾಸ್ತವ್ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಗೆ ಕೇಂದ್ರ ಈ ಪ್ರತಿಕ್ರಿಯೆ ನೀಡಿದೆ.
ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠದ ಮುಂದೆ ಈ ವಿಚಾರಣೆ ನಡೆದಿದ್ದು ಏಪ್ರಿಲ್ 27 ಕ್ಕೆ ಮತ್ತಷ್ಟು ವಿಚಾರಣೆ ನಡೆಸಲು ಪೀಠ ನಿರ್ಧಾರ ತೆಗೆದುಕೊಂಡಿದೆ. ಜಮ್ಮು ಕಾಶ್ಮೀರದ ಕಥುವಾದಲ್ಲಿ ನಡೆದ ಎಂಟು ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಕೊಲೆ ಹಿನ್ನೆಲೆಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಿದ್ದಾರೆ ಎನ್ನಲಾಗಿದೆ. ಇಂತಹಪ್ರಕರಣದಲ್ಲಿ ಭಾಗಿಯಾದ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸುವುದಕ್ಕೆ ಅವಕಾಶ ಕಲ್ಪಿಸುವ ಅಂಶ ಈ ತಿದ್ದುಪಡಿಯಲ್ಲಿ ಸೇರಿದೆ.
ಪೋಸ್ಕೋ ಕಾಯ್ದೆಯ ಪ್ರಕಾರ ಅತ್ಯಾಚಾರಿಗಳಿಗೆ ಗರಿಷ್ಠ ಶಿಕ್ಷೆ ಎಂದರೆ ಜೀವಾವಧಿ ಶಿಕ್ಷೆ ಕನಿಷ್ಠ ಎಂದರೆ 7 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ. ಆದರೆ ಈಗ ಮರಣ ದಂಡನೆ ಶಿಕ್ಷೆ ವಿಧಿಸುವ ಪ್ರಸ್ತಾವನೆ ಕೇಂದ್ರ ಸರ್ಕಾರದ ಮುಂದಿದೆ. ಕಾಯ್ದೆಗೆ ತಿದ್ದುಪಡಿ ಮಸೂದೆ ಕಾಯ್ದೆಯಾಗಲು ಜುಲೈ ನಲ್ಲಿ ನಡೆಯಲಿರುವ ಮುಂಗಾರು ಅಧಿವೇಶನದ ವರೆಗೂ ಕಾಯಬೇಕಾಗುತ್ತದೆ ಎಂದು ಕಾನೂನು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


