ದೇಶ

ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಮುಂದೆ ಬನ್ನಿ; ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಜನತೆ ಮುಂದಕ್ಕೆ ಬರುವ ಅಗತ್ಯವಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶುಕ್ರವಾರ ಹೇಳಿದ್ದಾರೆ...

ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಮುಂದೆ ಬನ್ನಿ; ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
Published On :
ನವದೆಹಲಿ; ಕಾಶ್ಮೀರದಲ್ಲಿ ಶಾಂತಿ ಸ್ಥಾಪಿಸಲು ಜನತೆ ಮುಂದಕ್ಕೆ ಬರುವ ಅಗತ್ಯವಿದೆ ಎಂದು ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಶುಕ್ರವಾರ ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ತಾನ ನಡೆಸುತ್ತಿರುವ ಕದನ ವಿರಾಮ ಉಲ್ಲಂಘನೆ, ಉಗ್ರರ ದಾಳಿ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇಂದಿಗೂ ಕಾಶ್ಮೀರ ವಿವಾದ ನಮಗೆ ದೊಡ್ಡ ವಿಚಾರವಾಗಿದೆ. ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡಲು ನಾವೆಲ್ಲರೂ ಮುಂದಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದ್ದು, 2018ನೇ ಪ್ರಸಕ್ತ ಸಾರಿನಲ್ಲಿ ಅಂತರಾಷ್ಟ್ರೀಯ ಗಡಿ ನಿಯಂತ್ರಣ ರೇಖೆ ಬಳಿ ಒಟ್ಟು 633 ಬಾರಿ ಕದನ ವಿರಾಮ ಉಲ್ಲಂಘನೆ ಮಾಡಿದೆ ಎಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.