ಸಿಜೆಐ ದೀಪಕ್ ಮಿಶ್ರಾ ಪದಚ್ಯುತಿ ನಿಲುವಳಿ ನೋಟಿಸ್: ಕಾಂಗ್ರೆಸ್ ರಾಜಕೀಯ ದಾಳ ಎಂದು ಅರುಣ್ ಜೇಟ್ಲಿ ಟೀಕೆ
ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡನೆಯನ್ನು...

ನವದೆಹಲಿ: ಭಾರತದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡನೆಯನ್ನು ಕಾಂಗ್ರೆಸ್ ಪಕ್ಷ ರಾಜಕೀಯ ಅಸ್ತ್ರವಾಗಿ ಬಳಸಿಕೊಳ್ಳುತ್ತಿದೆ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ.
ಅವರು ಇಂದು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ವಾಗ್ದಾಳಿ ನಡೆಸಿ, ಸುಪ್ರೀಂ ಕೋರ್ಟ್ ನ ಮೂವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠದ ಪರವಾಗಿ ನ್ಯಾಯಮೂರ್ತಿ ಲೋಯಾ ಸಾವು ಪ್ರಕರಣದಲ್ಲಿ 114 ಪುಟಗಳ ತೀರ್ಪು ಬರೆದಿರುವ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್, ಸಾರ್ವಜನಿಕ ಮತ್ತು ರಾಜಕೀಯ ಜೀವನದಲ್ಲಿ ತಪ್ಪುಗಳನ್ನು ಪ್ರಚಾರಮಾಡಲು ಪ್ರತಿಯೊಂದು ಹಂತದಲ್ಲಿಯೂ ಪಿತೂರಿ ನಡೆಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಅಮಿತ್ ಶಾ ಅವರ ಪಾತ್ರ ಸೊಹ್ರಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಇಲ್ಲ. ಇದು ಕೆಲವು ಕೇಂದ್ರ ಸಂಸ್ಥೆಗಳು ರಾಜ್ಯ ಪೊಲೀಸರೊಂದಿಗೆ ಸೇರಿ ನಡೆಸಿದ ಅಕ್ರಮ ಎನ್ ಕೌಂಟರ್ ಆಗಿದೆ ಎಂದು ದೂರಿದರು.
ಕಾಂಗ್ರೆಸ್ ಮತ್ತು ಇತರ ಆರು ಪ್ರತಿಪಕ್ಷಗಳು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ಪದಚ್ಯುತಿ ನಿಲುವಳಿ ಮಂಡನೆ ನಡೆಯನ್ನು ಉಲ್ಲೇಖಿಸಿದ ಅವರು, ಕಾಂಗ್ರೆಸ್ ಮತ್ತು ಅದರ ಮೈತ್ರಿಕೂಟಗಳು ಮುಖ್ಯ ನ್ಯಾಯಮೂರ್ತಿ ವಿರುದ್ಧ ಪದಚ್ಯುತಿಯನ್ನು ರಾಜಕೀಯ ಅಸ್ತ್ರವಾಗಿ ಬಳಸಿಕೊಂಡಿದೆ ಎಂದರು.
ಹೀಗೆ ರಾಜಕೀಯ ಪಕ್ಷಗಳು ಪದಚ್ಯುತಿ ನಿಲುವಳಿ ಮಂಡನೆಯನ್ನು ಕ್ಷುಲ್ಲಕಗೊಳಿಸುವುದು ಅಪಾಯಕಾರಿಯಾಗಿದ್ದು ಇದು ನ್ಯಾಯಾಧೀಶರನ್ನು ಬೆದರಿಸುವ ಪ್ರಯತ್ನವಾಗಿದೆ ಮತ್ತು ನೀವು ನಮ್ಮೊಂದಿಗೆ ಒಪ್ಪಿಕೊಳ್ಳದಿದ್ದರೆ ನಿಮ್ಮ ವಿರುದ್ಧ ಸೇಡು ತೀರಿಸಿಕೊಳ್ಳಲು 50 ಸಂಸದರು ನಮ್ಮೊಂದಿಗಿದ್ದರೆ ಸಾಕು ಎಂಬ ಸಂದೇಶವನ್ನು ಕಳುಹಿಸುತ್ತದೆ ಎಂದು ಜೇಟ್ಲಿ ಒತ್ತಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


