ದೇಶ

ಉನ್ನಾವ್ ಅತ್ಯಾಚಾರ ಪ್ರಕರಣ: ಏಪ್ರಿಲ್ 27ರವರೆಗೆ ಆರೋಪಿ ಶಾಸಕ ಸೆಂಗಾರ್ ಸಿಬಿಐ ಬಂಧನ ಅವಧಿ ವಿಸ್ತರಣೆ

ದೇಶಾದ್ಯಂತ ಭಾರಿ ಸುದ್ದಿಗೆ ಗುರಿಯಾಗಿರುವ ಉತ್ತರ ಪ್ರದೇಶದ ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಸಿಬಿಐ ಬಂಧನ ಅವಧಿಯನ್ನು ಏಪ್ರಿಲ್ 27ರವೆರೆಗೂ ವಿಸ್ತರಣೆ ಮಾಡಲಾಗಿದೆ.

ಉನ್ನಾವ್ ಅತ್ಯಾಚಾರ ಪ್ರಕರಣ: ಏಪ್ರಿಲ್ 27ರವರೆಗೆ ಆರೋಪಿ ಶಾಸಕ ಸೆಂಗಾರ್ ಸಿಬಿಐ ಬಂಧನ ಅವಧಿ ವಿಸ್ತರಣೆ
ಸಂಗ್ರಹ ಚಿತ್ರ
Published On :
ಲಖನೌ: ದೇಶಾದ್ಯಂತ ಭಾರಿ ಸುದ್ದಿಗೆ ಗುರಿಯಾಗಿರುವ ಉತ್ತರ ಪ್ರದೇಶದ ಉನ್ನಾವ್ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಸಿಬಿಐ ಬಂಧನ ಅವಧಿಯನ್ನು ಏಪ್ರಿಲ್ 27ರವೆರೆಗೂ ವಿಸ್ತರಣೆ ಮಾಡಲಾಗಿದೆ.
ಉತ್ತರ ಪ್ರದೇಶದ ಸ್ಥಳೀಯ ಕೋರ್ಟ್ ಆರೋಪಿ ಶಾಸಕರನ್ನು ಮತ್ತೆ ಏಪ್ರಿಲ್ 27ರವರೆಗೂ ಸಿಬಿಐ ಅಧಿಕಾರಿಗಳ ವಶಕ್ಕೆ ನೀಡಿದೆ. ಪ್ರಕರಣ ಸಂಬಂಧ ಇಂದು ಸಿಬಿಐ ಅಧಿಕಾರಿಗಳು ಆರೋಪಿ ಶಾಸಕ ಸೆಂಗಾರ್ ನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆಯ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿದರು. ಈ ವೇಳೆ ಪರ-ವಿರೋಧಿ ವಕೀಲರ ವಾದ ಆಲಿಸಿದ ನ್ಯಾಯಮೂರ್ತಿ ಆಶುತೋಷ್ ಕುಮಾರ್ ಅವರು ಸೆಂಗಾರ್ ಅವರ ಸಿಬಿಐ ಬಂಧನ ಅವಧಿಯನ್ನು ಏಪ್ರಿಲ್ 27ರವರೆಗೂ ವಿಸ್ತರಣೆ ಮಾಡಿದರು.
ಈ ವೇಳೆ ಸರ್ಕಾರಿ ವಿಶೇಷ ಅಭಿಯೋಜಕರಾದ ಚಂದ್ರಿಕಾ ಪ್ರಸಾದ್ ಬಜಪಾಲ್ ಕೂಡ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.