ಅಪ್ರಾಪ್ತರ ಮೇಲಿನ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆಗೆ ಮಕ್ಕಳು ಹಕ್ಕು ಕಾರ್ಯಕರ್ತರ ವಿರೋಧ
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂಬ ಕೂಗು ದೇಶಾದ್ಯಂತ ಕೇಳಿಬರುತ್ತಿದ್ದು....

Published On :
ನವದೆಹಲಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂಬ ಕೂಗು ದೇಶಾದ್ಯಂತ ಕೇಳಿಬರುತ್ತಿದ್ದು, ಇದಕ್ಕೆ ಸ್ಪಂದಿಸಿದ ಕೇಂದ್ರ 12 ವರ್ಷದೊಳಗಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸುವ ವಿಧೇಯಕಕ್ಕೆ ಶನಿವಾರ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಆದರೆ ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಮಕ್ಕಳ ಹಕ್ಕುಗಳ ಕಾರ್ಯಕರ್ತರು ಮಾತ್ರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಅಪರಾಧಿಗಳಿಗೆ ಶಿಕ್ಷೆಯಾಗುವುದರ ಬಗ್ಗೆಯೇ ಅನುಮಾನ ಇದೆ. ಇಂತಹ ಪರಿಸ್ಥಿತಿಯಲ್ಲಿ ಸರ್ಕಾರ ಮತ್ತಷ್ಟು ಕಠಿಣ ಕಾನೂನು ಜಾರಿಗೆ ತರಲು ಬಯಸಿದೆ. ಭಾರತದಲ್ಲಿ ಹೆಚ್ಚಾಗಿ ಕುಟುಂಬ ಸದಸ್ಯರಿಂದಲೇ ಮಕ್ಕಳ ಮೇಲೆ ಅತ್ಯಾಚಾರ ನಡೆಯುತ್ತಿದೆ. ಸರ್ಕಾರ ಗಲ್ಲು ಶಿಕ್ಷೆ ಜಾರಿಗೆ ತಂದರೆ ತಪ್ಪಿಸಿಕೊಳ್ಳಲು ಪ್ರಚೋದನೆ ನೀಡಿದಂತಾಗುತ್ತದೆ ಎಂದು ಮಕ್ಕಳು ಹಕ್ಕು ಹೋರಾಟಗಾರ್ತಿ ಭಾರ್ತಿ ಅಲಿ ಅವರು ಹೇಳಿದ್ದಾರೆ.
ಅತ್ತಾಚಾರ ಪ್ರಕರಣಗಳು ಹೆಚ್ಚಾಗಿ ವರದಿಯಾಗುವುದಿಲ್ಲ ಮತ್ತು ಶೇ.95ರಷ್ಟು ಅತ್ಯಾಚಾರಗಳು ಕುಟುಂಬ ಸದಸ್ಯರಿಂದಲೇ ನಡೆಯುತ್ತಿವೆ ಎಂಬುದು ರಾಷ್ಟ್ರೀಯ ಅಪರಾಧ ದಾಖಲೆ ಮಂಡಳಿಯಿಂದ ತಿಳಿದು ಬಂದಿದೆ. ಈ ಪೈಕಿ ಶಿಕ್ಷೆಯಾಗುತ್ತಿರುವುದು ಕೇವಲ ಶೇ.24ರಷ್ಟು ಮಾತ್ರ ಎಂದು ಅವರು ಹೇಳಿದ್ದಾರೆ.
ಪೋಕ್ಸೋ ಕಾಯ್ದೆಯಡಿ ದಾಖಲಾಗುವುದು ಪ್ರಕರಣಗಳಲ್ಲಿ ಶೇ.20ರಷ್ಟು ಮಾತ್ರ ಶಿಕ್ಷೆಯಾಗುತ್ತಿದೆ ಎಂದು ಅಲಿ ತಿಳಿಸಿದ್ದಾರೆ.
ಇರುವ ಶಿಕ್ಷೆಯನ್ನೇ ಆದಷ್ಟು ಬೇಗ ಅಂದರೆ ಕನಿಷ್ಠ 90 ದಿನಗಳಲ್ಲಿ ಶಿಕ್ಷೆಯಾದರೆ ಅದು ಕಠಿಣ ಶಿಕ್ಷೆಗಿಂತಲೂ ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ಅವರು ಹೇಳಿದ್ದಾರೆ.
ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ ಜಾರಿಗೆ ತಂದರೆ ಸಾಕಷ್ಟು ಪ್ರಕರಣಗಳು ವರದಿಯಾಗುವುದಿಲ್ಲ ಎಂಬ ಬಗ್ಗೆ ನನಗೆ ಆತಂಕ ಇದೆ. ಏಕೆಂದರೆ ಆರೋಪಿಗಳು ಕುಟುಂಬ ಸದಸ್ಯರೇ ಆಗಿರುತ್ತಾರೆ. ಇದರಿಂದ ಅಪರಾಧಿಗಳ ಪ್ರಮಾಣ ಕಡಿಮೆಯಾಗಲಿದೆ ಎಂದು ರಾಷ್ಟ್ರೀಯ ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಸದಸ್ಯ ವಿನೋದ್ ತಿಕೂ ಹೇಳಿದ್ದಾರೆ.
ಈಗ ಜಾರಿಯಲ್ಲಿರುವ ಮಕ್ಕಳ ಮೇಲಿನ ಲೈಂಗಿಕ ಅಪರಾಧ ತಡೆ ಕಾಯಿದೆಯಡಿ (ಪೋಕ್ಸೋ) ಮಕ್ಕಳ ಮೇಲೆ ಅತ್ಯಾಚಾರ ಅಪರಾಧ ಎಸಗುವವರಿಗೆ ಕನಿಷ್ಠ 7 ವರ್ಷ ಮತ್ತು ಗರಿಷ್ಠ ಜೀವಾವಧಿ ಜೈಲು ಶಿಕ್ಷೆ ಇದೆ.
ಕತುವಾ ಮತ್ತು ಉನ್ನಾವೋ ಗ್ಯಾಂಗ್ ರೇಪ್ ಪ್ರಕರಣಕ್ಕೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು ಮತ್ತು ಮಕ್ಕಳ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂಬ ಆಗ್ರಹ ಮುಗಿಲು ಮುಟ್ಟಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಈ ಅತ್ಯುಗ್ರ ವಿಧೇಯಕವನ್ನು ಪಾಸು ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
death penaltyಗಲ್ಲು ಶಿಕ್ಷೆChild rights activistsrape of minorsಮಕ್ಕಳ ಹಕ್ಕು ಕಾರ್ಯಕರ್ತರುಅಪ್ರಾಪ್ತರ ಮೇಲೆ ಅತ್ಯಾಚಾರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


